ಟಿಎಪಿಸಿಎಂಎಸ್: ಜುಲೈ 22ರಂದು ವಾರ್ಷಿಕ ಸರ್ವ ಸದಸ್ಯರ ಸಭೆ
ಚಿತ್ರದುರ್ಗ ಜುಲೈ19:
ಚಿತ್ರದುರ್ಗ ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟದ ಸಹಕಾರ ಸಂಘದ 74ನೇ ವರ್ಷದ 2022-23ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಇದೇ ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯ ತಿರುಮಲ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಟಿಎಪಿಸಿಎಂಎಸ್ ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಹೆಚ್.ಎಂ. ಮಂಜುನಾಥಪ್ಪ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಕಾರ್ಯದರ್ಶಿ ಜಿ.ಎನ್.ಉಮಾಶಂಕರ್ ತಿಳಿಸಿದ್ದಾರೆ.