ಚಿತ್ರದುರ್ಗ ಜಿಲ್ಲೆಯಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಇದರ
ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ವಿಪತ್ತು ನಿರ್ವಹಣಾ ಸಮಿತಿ
ಅಧ್ಯಕ್ಷರಾದ ದಿವ್ಯ ಪ್ರಭು ಅವರು ಪ್ರಾಥಮಿಕ ಮತ್ತು ಪ್ರೌಢ
ಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಿದ್ದಾರೆ.
ಮುಂದಿನ ಎರಡು ದಿನಗಳು ನಿರಂತರ ಮಳೆಯಾಗುವ
ಮುನ್ಸೂಚನೆ ಇದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಮತ್ತು
ಗುರುವಾರ ರಜೆ ಘೋಷಿಸಿದ್ದಾರೆ.