ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಂತ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ:: ಗಿಡ್ಡಾಪುರ ಬಳಿಯಲ್ಲಿ ಇಂದು ಖಾಸಗಿ ಒಂದು ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪು, ಪಲ್ಟಿಯಾಗಿರುವುದಾಗಿ ತಿಳಿದು ಬಂದಿದೆ.
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಗರಣಿ ಕ್ರಾಸ್ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಎದುರುಗಡೆಯಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಅದರಲ್ಲಿದ್ದಂತ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.