ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು
ಚಳ್ಳಕೆರೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ತಾಲ್ಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ವೀರಶೈವ ಸೇವಾ ಸಂಘ ಮತ್ತು ತಾಲ್ಲೂಕು ವೀರಶೈವ ಸಂಘಗಳ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ನಡೆದ ವೀರಶೈವ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಜನ ಮಾನಸದಲ್ಲಿ ಉಳಿಯುವಂತೆ ಮಾಡಿದೆ ಆದ್ದರಿಂದ ನಾವು ಹಿರಿಯರನ್ನು, ಪೂಜಿಸುವ ಗೌರವಿಸುವ ಮನೋಭಾವ ತಾಳಬೇಕು ಎಂದರು.
ಈದೇ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ, ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ಹಾಗೂ ನಗರಸಭೆ ಸದಸ್ಯರಾದ ಕೆ.ಸಿ. ನಾಗರಾಜ, ಸಾವಿತ್ರಮ್ಮ, ಸಮುದಾಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
?