ಪತ್ನಿಯ ಶೀಲ ಶಂಕಿಸಿ ವಿಕೃತಿ ಮೆರೆದ ಪತಿ
ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯ ಕೊಲೆಗೆ ಯತ್ನಿಸಿದ ವಿಕೃತ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಆರೋಗ್ಯ ಇಲಾಖೆಯಲ್ಲಿ ಫಾರ್ಮಸಿಸ್ಟ್ ಆಗಿರುವ ಭಾಸ್ಕರ್ ಈ ಕೃತ್ಯ ಎಸಗಿದ್ದು, ಪತ್ನಿ ರೇಖಾ ಸ್ಥಿತಿ ಗಂಭೀರವಾಗಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ.
ಪತ್ನಿ ರೇಖಾ ಶೀಲ ಶಂಕಿಸಿ ಗಲಾಟೆ ಆರಂಭಿಸಿದ ಭಾಸ್ಕರ್, ಮಾತಿಗೆ ಮಾತು ಬೆಳೆದಿದ್ದು ಕೋಪಗೊಂಡು ಪತ್ನಿಯ ಗುಪ್ತಾಂಗಕ್ಕೆ ವಿಕೆಟ್ ನಿಂದ ಚುಚ್ಚಿ ಹಲ್ಲೆ ನಡೆಸಿದ್ದಾನೆ.
ಮನಬಂದಂತೆ ವಿಕೆಟ್ ನಿಂದ ಭಾಸ್ಕರ್ ಚುಚ್ಚಿದ್ದರಿಂದ ಮನೆಯೆಲ್ಲಾ ರಕ್ತಮಯವಾಗಿದೆ. ಇದರಿಂದ ಆಕೆಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಪತ್ನಿ ರೇಖಾ ಗಂಭೀರವಾದ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಆಕೆಯ ಸ್ಥಿತಿ ಶೋಚನೀಯವಾಗಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಪತಿ ಭಾಸ್ಕರ್ ರ್ಮಾನಸಿಕ ಖಿನ್ನತೆಗೊಳಗಾಗಿ ಈ ರೀತಿ ವಿಕೃತಿ ಮೆರೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಆರೋಪಿ ಭಾಸ್ಕರ್ ರ್ಪೊಲೀಸರ ವಶದಲ್ಲಿದ್ದು,
ಚಳ್ಳಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.