ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ನೀಡಿದ್ದು ರಾಜ್ಯಾದ್ಯಂತ ಮಹಿಳೆಯರು ಸೈಬರ್ ಸೆಂಟರ್ ಗಳ ಮುಂದೆ ಜಮಾಯಿಸಿದ್ದಾರೆ
ಅದರಂತೆ ಚಳ್ಳಕೆರೆ ನಗರದ ಕರ್ನಾಟಕ ಒನ್ ಗೆ ಭೇಟಿ ನೀಡಿದ ಅವರು ಗೃಹ ಲಕ್ಷ್ಮೀ ಯೋಜನೆಯ ಪ್ರಮಾಣ ಪತ್ರವನ್ನು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಫಲಾನುಭವಿಗೆ ನೀಡಿ ಸರಕಾರದ ಹೆಗ್ಗುರುತುಗಳ ಬಗ್ಗೆ ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಟು.ಲೀಲಾವತಿ, ಕರ್ನಾಟಕ ಒನ್ ಮಾಲೀಕರಾದ ಪುರುಷೋತ್ತಮ್, , ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಾಮಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ನಗರಸಭೆ ಸದಸ್ಯರಾದ ರಾಘವೇಂದ್ರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದರು.