ವಿಕಲಚೇತನರ ಸೌಲಭ್ಯ: ಆನ್‍ಲೈನ್ ಮೂಲಕ ಅರ್ಜಿ ಅಹ್ವಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆಗಸ್ಟ್.2:
2023-24ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ 8 ಯೋಜನೆಗಳಿಗೆ ಸುವಿಧಾ ತಂತ್ರಾಂಶದಡಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ದಿನ ಆಗಿರುತ್ತದೆ.
ಫಲಾನುಭವಿ ಆಧಾರಿತ ಯೋಜನೆಗಳ ಹೆಸರು: ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ(ಎಂಆರ್‍ಡಬ್ಲ್ಯೂ, ವಿಆರ್‍ಡಬ್ಲ್ಯೂ), ವೈದ್ಯಕೀಯ ಪರಿಹಾರ ನಿಧಿ, ನಿರುದ್ಯೋಗ ಭತ್ಯೆ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ಶಿಶುಪಾಲನಾ ಭತ್ಯೆ ಯೋಜನೆಗಳಿಗೆ ಇಲಾಖೆಯ ವೆಬ್‍ಸೈಟ್ https://sevasindhu.karnataka.gov.in/sevasindhu/departmentservices ನಲ್ಲಿ ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಒಂದು ಹಾರ್ಡ ಪ್ರತಿಯನ್ನು ಆಯಾ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ ಸಲ್ಲಿಸಬೇಕು.
ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಖ್ಯೆ ಚಿತ್ರದುರ್ಗ-9880821934, ಚಳ್ಳಕೆರೆ-9611266930, ಹಿರಿಯೂರು-9902888901, 9902898901, ಹೊಳಲ್ಕೆರೆ-9740030227, ಹೊಸದುರ್ಗ-9741829990, ಮೊಳಕಾಲ್ಮೂರು-9742725576 ಗೆ ಸಂಪರ್ಕಿಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಭಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235282 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Namma Challakere Local News
error: Content is protected !!