ಚಿತ್ರದುರ್ಗ (ಕರ್ನಾಟಕ ವಾರ್ತೆ)ಆ.11:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶನದಂತೆ 2021 ಮತ್ತು 2022ನೇ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳು ಇದೇ ಆಗಸ್ಟ್ 14ರೊಳಗೆ ಪೂರ್ಣ ವಿವರಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಗೆ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.