ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಸಾವನ್ನಪ್ಪಿರುವ ಘಟನೆಗೆ ಸಂಬAಧಿಸಿದAತೆ ಎಚ್ಚೆತ್ತುಕೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಈಡೀ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮುಂಜಾಗ್ರತ ಕ್ರಮವಾಗಿ ಜಾಗೃತಿ ಜಾಥಗಳನ್ನು ಮಾಡುತ್ತಿದ್ದಾರೆ.
ಇನ್ನೂ ಕಲುಷಿತ ನೀರು ಸೇವನೆ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಎಲ್ಲಾ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಹಾಗೂ ಸ್ವಚ್ಚತೆ ನೈರ್ಮಲ್ಯೀಕರಣ ಬಗ್ಗೆ ಅರಿವು ಮೂಡಿಸುವ ಸಲುವಾಗಿ
ಚಳ್ಳಕೆರೆ ನಗರದ ವ್ಯಾಪ್ತಿಯಲ್ಲಿ ನಗರಸಭೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಿಂದ ಇಂದು ನಗರದ ನೆಹರು ವೃತ್ತದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಜಾಥಕ್ಕೆ ಪೌರಾಯುಕ್ತ ಸಿ.ಚಂದ್ರಪ್ಪ ಚಾಲನೆ ನೀಡಿದರು.
ಇನ್ನೂ ನಗರದ ನೆಹರು ವೃತ್ತದಿಂದ ಶುದ್ದ ಕುಡಿಯುವ ನೀರು ಹಾಗೂ ಸ್ವಚ್ಚತೆ ನೈರ್ಮಲ್ಯಕರಣ ಬಗ್ಗೆ ಅರಿವು ಮೂಡಿಸುವ ಜಾಗೃತಿ ಜಾಥದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಹಾಗೂ ನಗರಸಭೆ ಸಿಬ್ಬಂದಿ ಪ್ಲೆಕ್ಸ್ , ಘೋಷಣಾ ಫಲಕಗಳನ್ನು ಹಿಡಿದು ಹೆಜ್ಜೆ ಹಾಕಿದರು.
ಇದೇ ಸಂಧರ್ಭದಲ್ಲಿ ಆರೋಗ್ಯ ಇಲಾಖೆಯ ಸಹಾಯಕ ಅಧಿಕಾರಿ ಕುದಾಪುರ ತಿಪ್ಪೆಸ್ವಾಮಿ ಹಾಗು ಸಿಬ್ಬಂದಿ ನಗರದ ನೆಹರು ವೃತ್ತದಿಂದ ಪಾವಗಡ ರಸ್ತೆ ಮೂಲಕ ಕೆಸಿಆರ್ ರಸ್ತೆ, ತೇರು ಬೀದಿ ರಸ್ತೆ ವರೆಗೆ ಮುಂದುವರದು ಪಾದಗಟ್ಟೆಯಿಂದ ಕಾಟಂಲಿAAಗೇಶ್ವರ ದೇವಾಸ್ಥಾನದವರೆಗೆ ಜಾಗೃತಿ ಜಾಥ ಮಾಡಿದರು.