ಗ್ರಾಮೀಣ ಭಾಗದಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಿ : ಜಿಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್
ಚಳ್ಳಕೆರೆ: ದುಡಿಯವ ಕೈಗಳಿಗೆ ಕೆಲಸ ನೀಡುವ ಮೂಲಕ ಅವರ ಆರ್ಥಿಕ ಮಟ್ಟ ಸುಧಾರಿಸಬೇಕು ಗ್ರಾಮಿಣ ಪ್ರದೇಶದ ಜನರಿಗೆ ನರೇಗಾದಲ್ಲಿ ಕೂಲಿ ಮಂಜೂರು ಮಾಡಿ ಕೂಲಿಕಾರ್ಮಿಕರಿಗೆ ಗ್ರಾಮ ಪಂಚಾಯಿತಿಯಿAದ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಆಯೋಜಿಸಿ ಕೂಲಿಕಾರ್ಮಿಕರ ಬದುಕಿಗೆ ಆಸರೆಯಾಗಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ.ಸೋಮಶೇಖರ್ ಹೇಳೀದರು.
ಅವರು ನಗರದ ತಾಲ್ಲೂಕು ಪಂಚಾಯಿತಿ ಸಭಾಗಂಣದಲ್ಲಿ ಅಧಿಕಾರಿಗಳ ಸಭೆಯಲ್ಲಿ ಪ್ರಗತಿಪರಿಶೀಲನೆ ಸ್ಥಿತಿಯನ್ನು ನಡೆಸಿದರು. ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಿಧ ಯೋಜನೆಗಳ ಅನುಷ್ಠಾನ, ಖರ್ಚು,ವೆಚ್ಚ ಮೂಲ ಸೌಕರ್ಯ, ಕುಡಿಯುವ ನೀರು, ವಿದ್ಯುತ್ ಪೂರೈಕೆ, ಘನತ್ಯಾಜ್ಯ ವಿಲೇವಾರಿ ಘಟಕಗಳ ಕಾರ್ಯನಿರ್ವಹಣೆಯ ಬಗ್ಗೆ ಚರ್ಚೆ ನಡೆಸಿದರು.
ಸರ್ಕಾರ ಜಿಲ್ಲೆಯ ಎರಡೂ ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಈಗಾಗಲೇ ಘೋಷಣೆ ಮಾಡಿದೆ. ಜಿಲ್ಲೆಯಲ್ಲಿ ಇನ್ನೂ ಎರಡು ತಾಲ್ಲೂಕುಗಳ ಘೋಷಣೆಯಾಗಬೇಕಿದೆ. ಆದರೂ ಸಹ ಅಧಿಕಾರಿ ವರ್ಗ ಸಾರ್ವಜನಿಕರ ಹಿತದೃಷ್ಠಿಯಿಂದ ಉತ್ತಮವಾಗಿ ಕೆಲಸ ಮಾಡಬೇಕಾಗುತ್ತದೆ. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ನಿರೀಕ್ಷಿತ ಮಟ್ಟದ ವೇಗ ಕಾಣುತ್ತಿಲ್ಲ, ಆದ್ದರಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕೆಲಸ ಕಾರ್ಯಗಳ ಬಗ್ಗೆ ಹೆಚ್ಚಿನ ಗಮನ ಹಾಗೂ ಆದ್ಯತೆ ನೀಡಬೇಕು. ನೀವು ಮಾಡುವ ಉತ್ತಮ ಕೆಲಸದಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿಯಷ್ಟೇಯಲ್ಲದೆ, ಇಲಾಖೆಗೂ ಉತ್ತಮ ಹೆಸರು ಬರಲಿಸದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜೆ.ಕೆ. ಹೊನ್ನಯ್ಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿವಿಧ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈಗಾಗಲೇ ಹಲವಾರು ಕಾಮಗಾರಿಗಳ ಅನುಷ್ಠಾನಗೊಳಿಸಲಾಗಿದೆ. ಸ್ವಚ್ಛತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ಯಾವುದೇ ರೀತಿಯ ತೊಂದರೆ ಉಂಟಾಗದAತೆ ಜಾಗ್ರತೆ ವಹಿಸಿದೆ. ಪ್ರತಿನಿತ್ಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಾಗುತ್ತಿದೆ. ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಕೊಡುವ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ ಸಕರಾತ್ಮಕವಾಗಿ ಕಾರ್ಯನಿರ್ವಹಿಸಲಿದೆ ಎಂದರು.
ಇದೇ ಸಂದರ್ಭದಲ್ಲಿ ನರೇಗಾ ಯೋಜನೆಯಡಿ ತಾಲ್ಲೂಕಿನ ಸಾಣೀಕೆರೆ ಗ್ರಾಮದಲ್ಲಿ ನಿರ್ಮಾಣವಾದ ಅಮೃತ ಸರೋವರ, ಬೆಳಗೆರೆಯಲ್ಲಿ ನಿರ್ಮಾಣವಾದ ಕಲ್ಯಾಣಿ ಮತ್ತು ಘನತ್ಯಾಜ್ಯ ಘಟಕವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ನಿರ್ವಹಣೆಯಲ್ಲಿ ಯಾವುದೇ ಲೋಪ ಉಂಟಾಗದAತೆ ಜಾಗ್ರತೆ ವಹಿಸಬೇಕು. ಯಾವುದೇ ಸಮಸ್ಯೆ ಉಂಟಾದಲ್ಲಿ ಸಂಬAಧಪಟ್ಟ ಪಿಡಿಒ ಮೇಲೆ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದರು.
ಈ ಸಂಧರ್ಭದಲ್ಲಿ ಕೊರಮತಿಮ್ಮಪ್ಪ, ಜಿಲ್ಲಾ ಮುಖ್ಯಯೋಜಣಾಧಿಕಾರಿ ಸತೀಶ್‌ರೆಡ್ಡಿ, ಕಾರ್ಯಪಾಲಕ ಅಭಿಯಂತರ ಹನುಮಂತಪ್ಪ, ತಾಪಂ.ಸಹಾಯಕ ನಿದೇರ್ಶಕ ಸಂತೋಷ್‌ಕುಮಾರ್, ಹಾಗೂ ಎಲ್ಲಾ ಗ್ರಾಪಂ.ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.