ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಕೆಂಚವೀರನಹಳ್ಳಿ ಗ್ರಾಮದಲ್ಲಿ ನಡೆದ ಸಸ್ಯ ಶ್ಯಾಮಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ತಾಲ್ಲೂಕು ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಛೇರಿ ಅರಣ್ಯ ಇಲಾಖೆ ಚಳ್ಳಕೆರೆ ಇವರ ಸಹಯೋಗದೊಂದಿಗೆ ಚಳ್ಳಕೆರೆ ತಾಲೂಕಿನ ಕೆಂಚವೀರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಸಸ್ಯ ಶ್ಯಾಮಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಅರಣ್ಯಾಧಿಕಾರಿಗಳಾದ ಬಾಬು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವೆಂಕಟೇಶ, ಸದಸ್ಯರಾದ ಓಂಕಾರಪ್ಪ, ಹನುಮಂತಪ್ಪ, ವೆಂಕಟೇಶ್, ತಿಪ್ಪಮ್ಮ, ದೇವರಾಜ್, ಮುಖಂಡರಾದ ಮಹಾಂತೇಶ್, ವಿಶ್ವ, ಬಸವರಾಜಪ್ಪ, ಶೇಖರಪ್ಪ, ರಾಜಣ್ಣ, ಅಶೋಕ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು