ಸೆ.17ರಂದು ವಿಶ್ವಕರ್ಮ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ
ಚಳ್ಳಕೆರೆ : ಸೆ.17ರಂದು ವಿಶ್ವಕರ್ಮ ಜಯಂತಿ ಆಚರಣೆ ಮಾಡುವ ಸಲುವಾಗಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ ರವರ ಘನ ಅಧ್ಯಕ್ಷತೆಯಲ್ಲಿ ದಿನಾಂಕ:13.09.2023 ರಂದು ಬೆಳಿಗ್ಗೆ : 11.00 ಗಂಟೆಗೆ ವಿಶ್ವಕರ್ಮ ಜಯಂತಿ ಆಚರಣೆಯ ಅಂಗವಾಗಿ ಪೂರ್ವಭಾವಿ ಸಭೆಯನ್ನು ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿರುತ್ತದೆ. ಸದರಿ ಸಭೆಗೆ ತಾವುಗಳು ಖುದ್ದಾಗಿ ಹಾಜರಾಗಲು ಹಾಗೂ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಲು ಈ ಮೂಲಕ ಕೋರಿದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.