ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಚಿತ್ರದುರ್ಗ ತಾಲ್ಲೂಕು ತುರುವನೂರು ಹೋಬಳಿಯ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಧ ವಿಷಯಗಳ ಮತ್ತು ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಶ್ರೀಮತಿ ನಾಗವೇಣಮ್ಮ, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಹನುಮಂತಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಮಹಂತಮ್ಮ, ಉಪಾಧ್ಯಕ್ಷರಾದ ಗಂಗಾಧರಯ್ಯ, ಸದಸ್ಯರುಗಳು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳ ಉಪಸ್ಥಿತರಿದ್ದರು.