ಬಡತನ-ಅನಕ್ಷರತೆ, ಅಸ್ಪೃಶ್ಯತೆಗೆ : ಶಿಕ್ಷಣವೊಂದೇ ಮೂಲ ಮಂತ್ರ — ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಸ್ವಾತಂತ್ರ‍್ಯ ಬಂದು 75 ವರ್ಷಗಳು ಕಳೆದರೂ ಸಹ ಇಂದಿಗೂ ಬಡತನ ಅನಕ್ಷರತೆ ಅಸ್ಪೃಶ್ಯತೆ ದಬ್ಬಾಳಿಕೆ ದೇಶದಲ್ಲಿ ಕಡಿಮೆಯಾಗಿಲ್ಲ ಇಂತಹ ಅನಿಷ್ಟ ಪದ್ದತಿಗಳು ನಿಲ್ಲಬೇಕಾದರೆ ಶಿಕ್ಷಣವೊಂದೇ ಮೂಲ ಮಂತ್ರವಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ಹೆಚ್.ಪಿ.ಪಿ.ಸಿ. ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂವಿಧಾನ ಪೀಠಿಕೆಯನ್ನು ಓದಿ ಕಾರ್ಯಕ್ರಮದಲ್ಲಿ ಮಾತನಾಡಿದರು. ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು
ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು, ದೇಶದ ಅಭಿವೃದ್ಧಿಗೆ ಮುಂದಾಗಬೇಕು ಡಾ. ಬಿ ಆರ್ ಅಂಬೇಡ್ಕರ್ ಅವರ ಸಂವಿಧಾನವನ್ನು ದೇಶವು ಸರ್ವಾನು ಮತದಿಂದ ಒಪ್ಪಿದ್ದು ಈ ಸಂವಿಧಾನ ಎಲ್ಲಾ ಕಾಲಕ್ಕೂ ಸಲ್ಲುವಂತದ್ದಾಗಿದ್ದು ಇತರೆ ದೇಶಗಳು ಸಹ ಈ ಸಂವಿಧಾನವನ್ನು ಮಾದರಿಯಾಗಿಟ್ಟುಕೊಂಡು ತಮ್ಮ ದೇಶದ ಸಂವಿಧಾನಗಳನ್ನು ರಚಿಸಿಕೊಳ್ಳುವಷ್ಟರ ಮಟ್ಟಿಗೆ ಮಾದರಿಯಾಗಿದೆ ನಾವೆಲ್ಲರೂ ಸಂವಿಧಾನದ ಆಶಯಗಳಿಗೆ ಧಕ್ಕೆ ಬಾರದಂತೆ ಅದರಲ್ಲಿನ ಸತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಾರ್ಥಕ ಜೀವನ ನಡೆಸೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಆರ್ ರಂಗಪ್ಪ ಮಾತನಾಡಿ ಸಂವಿಧಾನವನ್ನು ತನ್ನ ಸ್ವಾರ್ಥಕ್ಕಾಗಿ ಬದಲಾಯಿಸಲು ಹೊರಟಿವೆ ಅಂಬೇಡ್ಕರ್ ಅವರ ಆಶಯದಂತೆ ಸಂದರ್ಭಕ್ಕೆ ತಕ್ಕಂತೆ ಬದಲಾಯಿಸುವ ಅವಕಾಶವಿದ್ದರೂ ತಮ್ಮ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಪಕ್ಷಗಳು ಬದಲಾವಣೆ ಮಾಡಿಲ್ಲ ದೇಶದ ಎಲ್ಲಾ ನಾಗರಿಕರು ಸಂವಿಧಾನಕ್ಕೆ ಗೌರವ ನೀಡಬೇಕಾಗಿರುವುದು ನಮ್ಮ ಕರ್ತವ್ಯವಾಗಿರುವುದರಿಂದ ಸಂವಿಧಾನದ ಪೀಠಿಕೆಯ ಆಶಯಗಳಿಗೆ ಧಕ್ಕೆ ಬಾರದಂತೆ ನಡೆದುಕೊಂಡು ಗೌರವ ಸೂಚಿಸೋಣ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವೀರಯ್ಯ ನಾಯ್ಕ್, ತಾಲೂಕು ದಂಡಾಧಿಕಾರಿಗಳಾದ ರೇಹಾನ್ ಪಾಷಾ,ವೃತ್ತ ನೀರೀಕ್ಷಕ ಕೆ.ಸಮಿವುಲ್ಲಾ, ಪೌರಾಯುಕ್ತರಾದ ಚಂದ್ರಪ್ಪ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೊನ್ನಯ್ಯ, ಡಿ.ವೈ.ಎಸ್.ಪಿ. ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ದಿವಾಕರ, ನಗರಸಭೆ ಸದಸ್ಯರಾದ ರಾಘವೇಂದ್ರ, ರಮೇಶ್ ಗೌಡ, ಕವಿತಾ ಬೋರಯ್ಯ, ಸುಮಾ ಭರಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಮುಖಂಡರಾದ ಪ್ರಕಾಶ್, ಪ್ರಹ್ಲಾದ್, ವೀರಭದ್ರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಕಾಲೇಜು ಸಿಬ್ಬಂದಿ ವರ್ಗದವರು , ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Namma Challakere Local News
error: Content is protected !!