ರಾಜ್ಯ ಸರ್ಕಾರದ 6ನೇ ಗ್ಯಾರಂಟಿ ಜಾರಿಗೊಳಸಲು ಆಲ್ ಇಂಡಿಯಾ ಟ್ರೇಡ್ ಯೂನಿಯಾನ್ ಕಾಂಗ್ರೇಸ್ ಪ್ರತಿಭಟನೆ ಮೂಲಕ ಮನವಿ

ಚಳ್ಳಕೆರೆ : ಆಲ್ ಇಂಡಿಯಾ ಟ್ರೇಡ್ ಯೂನಿಯಾನ್ ಕಾಂಗ್ರೇಸ್ ಚಳ್ಳಕೆರೆ ಇವರು ಅಂಗನಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸುವಂತೆ ಇಂದು ಪ್ರತಿಭಟನೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿದರು
ಮನವಿ ಪತ್ರ ಸಲ್ಲಿಸಿದ ತಾಲೂಕು ಅಧ್ಯಕ್ಷ ಸಿ.ವೈ.ಶಿವರುದ್ರಪ್ಪ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ಹೆಚ್ಚಿಸುವ ಹಾಗೂ ನಿವೃತ್ತರಿಗೆ ಇಡುಗಂಟು 3 ಲಕ್ಷ ರೂಪಾಯಿ ನೀಡುವ ಭರವಸೆಯನ್ನು ಸರ್ಕಾರದ 6ನೇ ಗ್ಯಾರಂಟಿಯನ್ನು ಜಾರಿಗೊಳಸಬೇಕು.
ಹಾಗೂ ಅಂಗನವಾಡಿ ವ್ಯವಸ್ಥೆಗೆ ವಿರುದ್ಧವಾಗಿ ಹಾಗೂ ಪರ್ಯಾಯವಾಗಿ ಶಿಶುಪಾಲನಾ ಕೇಂದ್ರಗಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಹೊರಡಿಸಿರುವ ಆದೇಶಗಳನ್ನು ವಾಪಸ್ಸು ಪಡೆದು ಅಂಗನವಾಡಿ ಕೇಂದ್ರಗಳಲ್ಲಿಯೇ ಶಾಲಾ ಪೂರ್ವ ತರಗತಿಗಳನ್ನು (ಎಲ್.ಕೆ.ಜಿ-ಯುಕೆಜಿ) ನಡೆಸಲು ವಿಶೇಷ ಸವಲತ್ತುಗಳನ್ನು ಒದಗಿಸಬೇಕು.
ಇನ್ನೂ ದೊಡ್ಡುಳ್ಳಾರ್ತಿ ಕರಿಯಣ್ಣ ಮಾತನಾಡಿ, ಗ್ರಾಚ್ಯುಟಿ ಪಡೆಯಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಅರ್ಹರು ಎಂಬುದಾಗಿ ಸುಪ್ರೀಂ ಕೋರ್ಟು ನೀಡಿರುವ ತೀರ್ಪನ್ನು ರಾಜ್ಯದಲ್ಲಿ ಜಾರಿಗೊಳಸಲು ಈ ವರೆಗೆ ನಿವೃತ್ತರಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ನೀಡಲು ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು. ಈ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಹಾಗೂ ಅಂಗನವಾಡಿ ಕೇಂದ್ರಗಳನ್ನು ಉಳಿಸಿ ಅಂಗನವಾಡಿ ವ್ಯವಸ್ಥೆಗಳನ್ನು ಬಲಗೊಳಸಿ, ಎಂಬ ಘೋಷಣೆಯೊಂದಿಗೆ ತಾಲೂಕಿನ ನೆಹರು ವೃತ್ತ ಹಾಗೂ ಅಂಬೇಡ್ಕರ್ ವೃತ್ತ ಮೂಲಕ ಪ್ರತಿಬಟನೆ ಮೆರವಣಿಗೆ ಮೂಲಕ ಸರಕಾರಕ್ಕೆ ಒತ್ತಾಯಿಸಿದರು.
ಅಂಗನವಾಡಿ ಕೇಂದ್ರಗಳಿರುವಲ್ಲಯೇ ರಾಜ್ಯ ಸರ್ಕಾರ ವಿವಿಧ ಇಲಾಖೆಗಳು ಪರ್ಯಾಯವಾಗಿ ಶಿಶುಪಾಲನಾ ಕೇಂದ್ರಗಳು ಮತ್ತು ಶಾಲಾ ಪೂರ್ವ ಶಿಕ್ಷಣ ತರಗತಿಗಳನ್ನು ವಿರೋಧಿಸಿ ಮತ್ತು ಅಂಗನವಾಗಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳದ 5ನೇ ಗ್ಯಾರಂಟಿ ಜಾರಿಗೊಳಸುವಂತೆ ಒತ್ತಾಯಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಳೆದ 48 ವರ್ಷಗಳಿಂದ ಶೂನ್ಯದಿಂದ 6 ವರ್ಷ ವಯೋಮಾನದ ಮಕ್ಕಳಿಗಾಗಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐ.ಸಿ.ಡಿ.ಎಸ್) ಯ ಮೂಲಕ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ, ಲಾಲನೆ-ಪಾಲನೆ, ಪೌಷ್ಠಿಕ ಆಹಾರ, ಶಾಲಾ ಪೂರ್ವ ಶಿಕ್ಷಣ ಇತ್ಯಾದಿ ಸೇವೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ ಇದೀಗ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಎಲ್ಲ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆಯೋ ಅದೇ ಪ್ರದೇಶಗಳಲ್ಲ. ಶಿಶುಪಾಲನಾ ಕೇಂದ್ರಗಳನ್ನು, ಶಾಲಾಪೂರ್ವ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿರುವುದು ಅಂಗನವಾಡಿ ಕೇಂದ್ರಗಳ
ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಸಂಘದ ಟಿ.ತಿಪ್ಪೆಸ್ವಾಮಿ ಆರೋಪ ಮಾಡಿದರು.
ಈಗಾಗಲೇ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಆಶ್ರಯದಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ. ಹಾಗೆಯೇ ಸಮಗ್ರ ಶಿಕ್ಷಣ- ಕರ್ನಾಟಕವು ಸರ್ಕರಿ ಶಾಲೆಗಳಲ್ಲಿ 4 ರಿಂದ 5 ವರ್ಷದ ವಯೋಮಾನದ ಮಕ್ಕಳಗಾಗಿ ಶಾಲಾ ಪೂರ್ವ ತರಗತಿಗಳನ್ನು ಪ್ರಾರಂಭಿಸಲು ಆದೇಶ ನೀಡಲಾಗಿದ್ದು, ಎಲ್.ಕೆ.ಡಿ.-ಯು.ಕೆ.ಜಿ. ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ. ಅದೇ ರೀತಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ ಶಿಶುಪಾಲನಾ ಕೇಂದ್ರಗಳನ್ನು ಪ್ರಾರಂಭಿಸಲು ಸಿದ್ಧತೆಗಳನು ಭರದಿಂದ ನಡೆಸಲಾಗಿದೆ. ಈ ಬಗ್ಗೆ ಆಯಾ ಇಲಾಖೆಗಳು ಸುತ್ತೋಲೆಗಳನ್ನು ಹೊರಡಿಸಿ: ಅಂಗನವಾಡಿಗಳು ನಿರ್ವಹಿಸಬೇಕಾದ ಕೆಲಸಗಳನ್ನು ಪರ್ಯಾಯಾಗಿ ಮಾಡಲು ಹೊರಟರೆ ಹಂತ-ಹAತವಾಗಿ ಅಂಗನವಾಡಿಗಳಿಗೆ ಬರುವ ಮಕ್ಕಳ ಸಂಖ್ಯೆ ಕಡಿಮೆಯಾಗಿ ಅಥವಾ ಅಂಗನವಾಡಿ ಕೇಂದ್ರಕ್ಕೆ ಮಕ್ಕಳು ಬಾರದೆ ಅಂಗನವಾಡಿಗಳು ದುರ್ಬಲಗೊಳ್ಳುವ ಅಥವಾ ಮುಚ್ಚುವ ಹಂತಕ್ಕೆ ಬಂದಿದೆ ಇದರ ಪರಿಣಾಮವಾಗಿ ಸದೃಢವಾದ ಅಂಗನವಾಡಿ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿರುವಾಗ ಅದಕ್ಕೆ ಪರ್ಯಾಯವಾಗಿ ಬೇರೆ ಬೇರೆ ಇಲಾಖೆಗಳು ಶಿಶುಪಾಲನಾ ಕೇಂದ್ರ ಮತ್ತು ಶಾಲಾ ಪೂರ್ವ ತರಗತಿಗಳನ್ನು ಪ್ರಾರಂಭಿಸಿದರೆ ಅನಗತ್ಯವಾಗಿ ಸರ್ಕಾರದ ಹಣ ಪೋಲಾಗುತ್ತಿಸುತ್ತಿರುವ ಧೋರಣೆ ಸರಿಯಾದುದಲ್ಲ. ಆರನೇ ಗ್ಯಾರಂಟಿ ಜಾರಿಗೊಳಿಸಿ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕಿ ಶ್ರೀಮತಿ ಪ್ರಿಯಾಂಕ ಗಾಂಧಿಯವರು ಬೆಳಗಾವಿ ಜಿಲ್ಲೆಯ ಖಾನಾಪುರಲದ್ದಿ ಅಂಗನವಾಡಿ ಸಂಘಟನೆಯ ನಾಯಕರೊಂದಿಗೆ ಸಮಾಲೋಚಿಸಿ ಗೌರವಧನವನ್ನು ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ಹೆಚ್ಚಿಸುವ ಹಾಗೂ ನಿವೃತ್ತರಿಗೆ ಇಡುಗಂಟು 3 ಲಕ್ಷ ರೂಪಾಯಿ ನೀಡುವ ಭರವಸೆಯನ್ನು ಸರ್ಕಾರದ 6ನೇ ಗ್ಯಾರಂಟಿಯಾಗಿ ಘೋಷಿಸಿದ್ದು, ಇದನ್ನು ರಾಜ್ಯ ಸರ್ಕಾರ ಕೂಡಲೇ ಘೋಷಿಸಿರುವ ಭರವಸೆಯನ್ನು ಈಡೇರಿಸಲು ಕ್ರಮವಹಿಸಬೇಕೆಂದು ಒತ್ತಾಯಿಸುತ್ತೇವೆ ಎಂದರು.
ಅAಗನವಾಡಿ ಕರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಟ ಪಡೆಯಲು ಅರ್ಹರು ಎಂಬ ಸುಪ್ರೀಂ ಕೋರ್ಟು ತೀರ್ಪನ್ನು ಎಲ್ಲಾ ನಿವೃತ್ತರಿಗೂ ಅನ್ವಯವಾಗುವಂತೆ ಜಾರಿಗೊಳಿಸಲು ಆಡಳಿತಾತ್ಮಕವಾಗಿ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು.
ಈದೇ ಸಂಧರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಂಘದ ಪದಾಧಿಕಾರಿಗಳು ಇದ್ದರು.

Namma Challakere Local News
error: Content is protected !!