ಚಳ್ಳಕೆರೆ : ತಾಲ್ಲೂಕು ಗೊಲ್ಲ ನೌಕರರ ಸಂಘದ ವತಿಯಿಂದ ನಗರದ ಯಾದವ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ನೂತನ ಶಾಸಕರಿಗೆ ಸನ್ಮಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅದರಂತೆ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರಿಗೆ ಸಂಘದಿAದ ಸನ್ಮಾನಿಸಿ ಅಭನಂದಿಸಿದರು
ಈ ಸಂದರ್ಭದಲ್ಲಿ ಶಾಸಕ ಎನ್ ವೈ ಗೋಪಾಲ ಕೃಷ್ಣ ಗೊಲ್ಲ ಸಮುದಾಯ ಗ್ರಾಮೀಣ ಭಾಗದ ಹಟ್ಟಿಗಳಿಂದ ಹೊರ ಬರಬೇಕು ಹಟ್ಟಿಗಳಲ್ಲಿ ಅಡಗಿರುವ ಮೌಡ್ಯವನ್ನು ತೊಲಗಿಸಬೇಕು ಇನ್ನೂ ಶೈಕ್ಷಣಿಕವಾಗಿ ಅಭಿವೃದ್ದಿ ಕಾಣಬೇಕು ಎಂದು ಕಿವಿಮಾತು ಹೇಳಿದರು.
ಇನ್ನೂ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಕಳೆದ ಹಲವು ದಶಕಗಳಿಂದ ಈ ಸಮುದಾಯದ ನಂಟನ್ನು ಹೊಂದಿದ್ದೆನೆ ಅವರ ಏಳಿಗೆಗೆ ಸದಾ ಶ್ರಮಿಸುತ್ತೆನೆ ಇನ್ನೂ ಸಮುದಾಯದಲ್ಲಿ ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಿ ಆರ್ಥಿಕವಾಗಿ ಸಬಲರಾಗಬೇಕು ಎಂದರು.
ಇದೇ ಸಂಧರ್ಭದಲ್ಲಿ ಡಿ.ವೈ.ಎಸ್.ಪಿ. ಬಿಟಿ.ರಾಜಣ್ಣ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಾಂತಮ್ಮ, ಪಂಚಾಯತ್ ಅಧ್ಯಕ್ಷರು ಹಾಗೂ ತಾಲೂಕು ಯಾದವ ಸಂಘದ ಅಧ್ಯಕ್ಷರಾದ ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಹಿರಿಯ ಮುಖಂಡರಾದ ಬಿ.ವಿ.ಸಿರಿಯಪ್ಪ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಸಮುದಾಯದವರು ಉಪಸ್ಥಿತರಿದ್ದರು.