ನಾಯಕನಹಟ್ಟಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ 73ನೇ ಜನ್ಮ ದಿನಾಚರಣೆ ಅಂಗವಾಗಿ ನಾಯಕನಹಟ್ಟಿ ಬಿಜೆಪಿ ಮಂಡಲದ ವತಿಯಿಂದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಈ ವೇಳೆ ಮಂಡಲ ಅಧ್ಯಕ್ಷ ಈ ರಾಮರೆಡ್ಡಿ ಮಾತನಾಡಿದ ರವರು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಜನಪರ ಕಾರ್ಯಕ್ರಮಗಳ ಮೂಲಕ ವಿಶ್ವದ ನಾಯಕರಾಗಿ ಗುರುತಿಸಿಕೊಂಡು ವಿಶ್ವ ಗುರುವಾಗಿ ಹೊರಹೊಮ್ಮಿದ್ದಾರೆ 2014ರ ಮುಂಚೆ ವಿಶ್ವ ಭೂಪಟದಲ್ಲಿ ಭಾರತ ದೇಶ ಕೇವಲ ಒಂದು ದೇಶವಾಗಿ ಗುರುತಿಸಿಕೊಂಡಿತ್ತು ಕಳೆದ ಹತ್ತು ವರ್ಷಗಳಲ್ಲಿ ವಿಶ್ವವೇ ಭಾರತದ ಕಡೆ ತಿರುಗಿ ನೋಡುವಂತೆ ಪ್ರಧಾನಿ ಮೋದಿಯವರು ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ ಸಾಧಿಸಿ ತೋರಿಸಿದ್ದಾರೆ ಕೋವಿಡ್ ಮಹಾಮಾರಿ ಉಲ್ಬಣಗೊಂಡಾಗ ಭಾರತದ ದೇಶವಾಸಿಗಳಿಗೆ ಉಚಿತ ವ್ಯಾಕ್ಸಿನ್ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ಉಚಿತ ಅಕ್ಕಿ ವಿತರಿಸಿ ಬಡಜನರ ಪ್ರಾಣ ಕಾಪಾಡಿದರು ಇದಲ್ಲದೆ ಇತ್ತೀಚೆಗಷ್ಟೇ ಚಂದ್ರಯಾನ 3 ಯಶಸ್ವಿಗೊಳಿಸಲು ವಿಜ್ಞಾನಿಗಳಿಗೆ ಪ್ರೋತ್ಸಾಹಿಸಿ ಭಾರತ ದೇಶ ಯಾವುದರಲ್ಲಿಯೂ ಕಡಿಮೆ ಇಲ್ಲ ಎಂಬಂತೆ ಕಳೆದ ಹತ್ತು ವರ್ಷಗಳಿಂದ ಸಾಧಿಸಿ ತೋರಿಸಿದ್ದಾರೆ ಇಂತಹ ಮಹಾನ್ ನಾಯಕರನ್ನು ಪಡೆದ ಬಿಜೆಪಿ ಪಕ್ಷ ಹಾಗೂ ದೇಶದ ಜನತೆ ಧನ್ಯರು ಮುಂದಿನ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದ್ದು ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಏರುವುದು ನಿಶ್ಚಿತ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೆಪ್ಟಂಬರ್ 17 ರಿಂದ ಅಕ್ಟೋಬರ್ 2 ಗಾಂಧಿ ಜಯಂತಿಯವರೆಗೆ ಬಿಜೆಪಿ ಪಕ್ಷದ ಜಿಲ್ಲಾ ತಾಲೂಕು ಹೋಬಳಿ ಹಾಗೂ ಬೂತ್ ಮಟ್ಟದ ಕಾರ್ಯಕರ್ತರಿಂದ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಣ್ಣು ಹಾಲು ವಿತರಣೆ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ರೂಪಿಸಿಕೊಂಡಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ನಾಯಕನಹಟ್ಟಿ ಮಂಡಲ ಅಧ್ಯಕ್ಷ ಈ ರಾಮರೆಡ್ಡಿ, ನಿಕಟ ಪೂರ್ವ ಅಧ್ಯಕ್ಷರಾದ ಎಂವೈಟಿ ಸ್ವಾಮಿ, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ . ಶಿವಣ್ಣ ಮಂಡಲ ಪ್ರಧಾನ ಕಾರ್ಯದರ್ಶಿ ಬೆಂಕಿ ಗೋವಿಂದಪ್ಪ, ಚನ್ನಗಾನಹಳ್ಳಿ ಮಲ್ಲೇಶ್, ನಾಗರಾಜ್, ಮಲ್ಲಿಕಾರ್ಜುನ, ಎಸ್ ಮಲ್ಲಿಕಾರ್ಜುನ ಅಬ್ಬೇನಹಳ್ಳಿ,ನಲಗೇತನಹಟ್ಟಿ ಟಿ ತಿಪ್ಪೇಸ್ವಾಮಿ, ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು