ಚಿತ್ರದುರ್ಗ(ಕರ್ನಾಟಕ ವಾರ್ತೆ) :
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ (ದಿವ್ಯಾಂಗಜನ್), ಕೃತಕ ಅಂಗಾಂಗ ತಯಾರಿಕಾ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಕೋ), ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ಸಾಮಾಜಿಕ ಅಧಿಕಾರಿತಾ ಶಿಬಿರ-ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 24ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಪ್ರವಾಸಿ ಮಂದಿರ ಎದುರಿನ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಉದ್ಘಾಟನೆ ನೆರವೇರಿಸುವರು. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಘನ ಉಪಸ್ಥಿತಿವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ ಗೌಡ, ಕೆ.ಎಸ್.ನವೀನ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

About The Author

Namma Challakere Local News
error: Content is protected !!