ಚಿತ್ರದುರ್ಗ(ಕರ್ನಾಟಕ ವಾರ್ತೆ)
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಹಿರಿಯೂರು ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ “ಪೋಕ್ಸೊ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ” ಕುರಿತು ಬಾಲ್ಯ ವಿವಾಹ ನಿಷೇದಾಧಿಕಾರಿಳಿಗೆ ಒಂದು ದಿನದ ಕಾರ್ಯಗಾರವನ್ನು ಸೆಪ್ಟೆಂಬರ್ 21ರಂದು ಬೆಳಿಗ್ಗೆ 9.30 ಗಂಟೆಗೆ ಹಿರಿಯೂರು ನಗರದ ಹುಳಿಯಾರ್ ರಸ್ತೆಯ ವಾಲ್ಮೀಕಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್.ರೇಖಾ ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮೊಹಮ್ಮದ್ ಮೊಯಿನುದ್ದಿನ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ. ಸೋಮಶೇಖರ್, ಪೊಲೀಸ್ ಅಧೀಕ್ಷಕ ಧರ್ಮೇಂದರ್ ಕುಮಾರ್ ಮೀನಾ, ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಶಿಲ್ಪ ತಿಮ್ಮಾಪುರ, ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶ ಹೆಚ್.ಡಿ. ಶ್ರೀಧರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಡಾ. ಆರ್. ಪ್ರಭಾಕರ, ಹಿರಿಯೂರು ವಕೀಲರ ಸಂಘದ ಅಧ್ಯಕ್ಷ ರಂಗೇನಹಳ್ಳಿ ರಾಮಚಂದ್ರಪ್ಪ, ಉಪಾಧ್ಯಕ್ಷೆ ಹೆಚ್. ಬೀನಾರಾಣಿ, ಪ್ರಧಾನ ಕಾರ್ಯದರ್ಶಿ ಜಿ.ಚಿತ್ರಲಿಂಗಪ್ಪ, ಆರೋಗ್ಯ ಮತ್ತು ಕಟುಂಬ ಕಲ್ಯಾಣಾಧಿಕಾರಿ ಆರ್. ರಂಗನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್. ಬಣಕಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳಿ, ಪೊಲೀಶ್ ಉಪ ಅಧೀಕ್ಷಕಿ ಎಸ್.ಚೈತ್ರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ. ಸವಿತಾ, ಹೊಸದುರ್ಗ ತಹಶೀಲ್ದಾರ್ ಕೆ.ಓ.ಪಾಲಯ್ಯ, ಕಾರ್ಯನಿರ್ವಾಹಣಾಧಿಕಾರಿ ಬಿ. ಸುನೀಲ್ ಕುಮಾರ್, ಪೊಲೀಸ್ ತರಬೇತಿ ಕಾರ್ಯಾಲಯದ ತರಬೇತಿದಾರ ಸಿ.ಜೆ. ಲೋಹಿತ್ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

About The Author

Namma Challakere Local News
error: Content is protected !!