ಚಿತ್ರದುರ್ಗ(ಕರ್ನಾಟಕ ವಾರ್ತೆ): ಚಿತ್ರದುರ್ಗ ತಾಲ್ಲೂಕು ಬೆಳಗಟ್ಟ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಇದೇ ಸೆಪ್ಟೆಂಬರ್ 25ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಟ್ಟ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಗಟ್ಟ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಎ.ಆರ್.ಸಂಪತ್ ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಾಹಕ ಟಿ.ಸುರೇಶ್ ತಿಳಿಸಿದ್ದಾರೆ.
About The Author
Post navigation
ಚಿತ್ರದುರ್ಗ(ಕರ್ನಾಟಕ ವಾರ್ತೆ):ಬದಲಾದ ಜೀವನ ಶೈಲಿಯಲ್ಲಿ ಕ್ರೀಡೆ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಹಿರಿಯ ನಾಗರಿಕರು ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಅವರ ದೇಹ ಹಾಗೂ ಮನಸ್ಸು ಸದೃಢವಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಹೇಳಿದರು.ನಗರದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ, ರೋಟರಿ ಕ್ಲಬ್ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಿತ್ಯವೂ ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೇಹವು ಚಟುವಟಿಕೆಯಿಂದ ಇರುವುದರಿಂದ ಮನಸ್ಸಿಗೆ ಆಹ್ಲಾದ ಸಿಗಲಿದೆ. ದೇಹವು ಸುಸ್ಥಿತಿಯಲ್ಲಿರಬೇಕಾದರೆ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳು ಪ್ರಮುಖವಾಗಿರುತ್ತವೆ. ಕ್ರೀಡೆ ಸೇರಿದಂತೆ ಯಾವುದಾದರೂ ಒಂದು ಚಟುವಟಿಯಲ್ಲಿ ಸಕ್ರಿಯವಾಗಿ, ಕ್ರಿಯಾತ್ಮಕವಾಗಿ ಭಾಗವಹಿಸುವುದರಿಂದ ಏಕತಾನತೆ, ಒಂಟಿತನದಿಂದ ಹೊರಬರಬಹುದು ಎಂದರು.ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಆರ್. ರಂಗಪ್ಪರೆಡ್ಡಿ ಮಾತನಾಡಿ, ಈ ಹಿಂದೆ ಹಿರಿಯ ನಾಗರಿಕರಿಗಾಗಿ ಸರ್ಕಾರದ ವತಿಯಿಂದ ಯಾವುದೇ ಸಮಾರಂಭಗಳು ಇರುತ್ತಿರಲಿಲ್ಲ. ಇತ್ತೀಚೆಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗಾಗಿ ಬಹಳಷ್ಟು ಉತ್ತೇಜನ ನೀಡುತ್ತಿವೆ. ಆರೋಗ್ಯ ತಪಾಸಣೆ ಶಿಬಿರಗಳು, ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳುತ್ತಿರುವುದು ಸಂತಸದ ಸಂಗತಿ. ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಕ್ರೀಡೆಯಲ್ಲಿ ಆಸಕ್ತಿ ಇರಬೇಕು. ಪ್ರತಿಯೊಬ್ಬ ಹಿರಿಯ ನಾಗಕರಿಕರು ಇದರ ಸದುಪಯೋಗ ಪಡೆದುಕೊಳ್ಳುವುದರ ಜೊತೆಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ ಮಾತನಾಡಿ, ಜೀವನದಲ್ಲಿ ಪ್ರತಿಯೊಬ್ಬರಿಗೂ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳು ಅತ್ಯಮೂಲ್ಯವಾಗಿರುತ್ತವೆ. ಹಿರಿಯ ನಾಗಕರಿಕರು ಮನೆಯಲ್ಲಿ ಇದ್ದು, ಮಾನಸಿಕವಾಗಿ ಕುಗ್ಗಿರುತ್ತಾರೆ. ಆದ್ದರಿಂದ ಅವರಿಗೆ ಈ ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಈ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದರಿಂದ ದೇಹ ಹಾಗೂ ಮನಸ್ಸು ಸದೃಢವಾಗಿರುತ್ತದೆ ಎಂದರು.ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅಕ್ಟೋಬರ್ 1 ರಂದು ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತ ಎಂ. ನೆಲವಗಿ, ರೋಟರಿ ಕ್ಲಬ್ ಅಧ್ಯಕ್ಷ ವಿ.ಜಿ.ಎಸ್. ಕನಕರಾಜ್, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ನೋಡಲ್ ಅಧಿಕಾರಿ ಜಿ. ಹರಿಪ್ರಸಾದ್, ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಹೆಚ್.ಜಯಣ್ಣ, ದೈಹಿಕ ಶಿಕ್ಷಣ ಶಿಕ್ಕರು, ಚಿತ್ರಕಲಾ ಹಾಗೂ ಸಂಗೀತ ಶಿಕ್ಷಕರು, ಹಿರಿಯ ನಾಗರಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.