ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವುದು ಶಿಕ್ಷಕರ ಹಾಗೂ ಪೋಷಕರ ಕರ್ತವ್ಯ :ಸರಸ್ವತಿ

ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ನಗರೀಕರಣದ ನೆಪದಲ್ಲಿ ಗಿಡ ಮರಗಳನ್ನು ಕಡಿದು ನಾಶ ಮಾಡಲಾಗುತ್ತಿದೆ ಇದರಿಂದಾಗಿ ಪರಿಸರದ ಮೇಲೆ ದುಷ್ಪರಿಣಾಮ ಬೀರಿ ಜೀವರಾಶಿಗೆ ತೊಂದರೆ ಉಂಟಾಗುತ್ತಿದೆ ಎಂದು ಸಾಯಿ ಚೇತನ ಶಾಲೆಯ ಕಾರ್ಯದರ್ಶಿ ಹಾಗೂ ವಕೀಲರಾದ ಸರಸ್ವತಿ ಅಭಿಪ್ರಾಯಪಟ್ಟರು.

ನಗರದ ಸಾಯಿ ಚೇತನ ಶಾಲೆ ಆವರಣದಲ್ಲಿ ಶಾಲೆಯ ಆಡಳಿತ ಮಂಡಳಿ ಹಾಗೂ ಧರ್ಮಸ್ಥಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪರಿಸರ ಮಾಹಿತಿ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಅರಿವನ್ನು ಮೂಡಿಸಿದರೆ ಮುಂದಿನ ದಿನಗಳಲ್ಲಿ ಮನೆಗೊಂದು ಸಸಿ ನೆಟ್ಟು ಪೋಷಿಸುವ ಜವಾಬ್ದಾರಿ ಹೊರುತ್ತಾರೆ ಪರಿಸರವನ್ನು ನಾವು ಉಳಿಸಿದರೆ ಪರಿಸರ ನಮ್ಮನ್ನು ಉಳಿಸುತ್ತದೆ ವಿದ್ಯಾರ್ಥಿಗಳು ತಮ್ಮ ಮನೆ ಹಾಗೂ ಶಾಲಾ ಆವರಣದ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸಲು ಗಿಡಮರಗಳನ್ನು ನೆಡುವ ಕಾರ್ಯ ಹಮ್ಮಿಕೊಳ್ಳಬೇಕು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಸಾಯಿ ಚೇತನ ಶಾಲೆ ಹಾಗೂ ಧರ್ಮಸ್ಥಳ ಸಂಘ ಈ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸಂತಸದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ತಿಪ್ಪೇಸ್ವಾಮಿ ಶಿಕ್ಷಕರಾದ ನಿರ್ಮಲ ಜಯಶ್ರೀ ಮಹೇಶ್ವರಿ ಸಂಧ್ಯಾ ರಂಜಿತ್ ಕುಮಾರ್ ಧರ್ಮಸ್ಥಳ ಸಂಘದ ಪದಾಧಿಕಾರಿಗಳಾದ ವಿಮಲಾ ಜ್ಯೋತಿ ಶೋಭಾ ಉಪಸ್ಥಿತರಿದ್ದರು.

Namma Challakere Local News
error: Content is protected !!