ಸೆ.25 ರಿಂದ 27 ರವರೆಗೆ ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.22:
ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಇದೇ ಸೆಪ್ಟೆಂಬರ್ 25 ರಿಂದ 27 ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ, ಸಾರ್ವಜನಿಕರಿಂದ ದೂರು, ಅಹವಾಲು ಸ್ವೀಕರಿಸುವರು.
ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ವಿವರ: ಇದೇ ಸೆಪ್ಟೆಂಬರ್ 25ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ಹಾಗೂ ಮೊಳಕಾಲ್ಮುರು ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಾಜರಿರುವರು. ಸೆ.26ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಚಳ್ಳಕೆರೆ ಹಾಗೂ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ ಹಾಜರಿರುವರು. ಸೆ.27ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಾಜರಿದ್ದು, ದೂರು, ಅಹವಾಲುಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವೀಕರಿಸುವರು.