ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಬಾಲೇನಹಳ್ಳಿ ಗ್ರಾಮದ ಹತ್ತಿರ ಇರುವ ಪುಣ್ಯ ಕೋಟಿ ಗೋ ಶಾಲೆಗೆ ಭೇಟಿ ನೀಡಿ ಕಾಲು ಬಾಯಿ ಲಸಿಕೆ ಅಭಿಯಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಪಶು ಸಂಗೋಪನಾ ಇಲಾಖೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ತಾಲ್ಲೂಕಿನ ಬಾಲೇನಹಳ್ಳಿ ಗ್ರಾಮದ ಹತ್ತಿರ ಇರುವ ಪುಣ್ಯ ಕೋಟಿ ಗೋ ಶಾಲೆಗೆ ಭೇಟಿ ನೀಡಿ ಕಾಲು ಬಾಯಿ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೋಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ರೇಹಾನ್ ಪಾಷಾ, ತಾಲ್ಲೂಕು ಪಶು ಅಧಿಕಾರಿಗಳಾದ ರೇವಣ್ಣ, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ತಿಪ್ಪೇಶ್ ರೆಡ್ಡಿ, ಕೆ.ಪಿ.ಸಿ.ಸಿ. ಸದಸ್ಯರಾದ ವೀರಭದ್ರ ಬಾಬು, ಗ್ರಾಮ ಪಂಚಾಯತಿ ಸದಸ್ಯರುಗಳು, ಮುಖಂಡರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.