ಚಿತ್ರದುರ್ಗ : ದಿನಾಂಕ : 22-9-2023ರಂದು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಮಂಡಳಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ ಚಿತ್ರದುರ್ಗ ಮತ್ತು ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ರೆಡ್ ರಿಬ್ಬನ್ ಕ್ಲಬ್ ಕಾಲೇಜುಗಳು ಚಿತ್ರದುರ್ಗ ಇವರುಗಳ ಸಹಯೋಗದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವದ ಅಂಗವಾಗಿ ಪದವಿ ವಿದ್ಯಾರ್ಥಿಗಳಿಗೆ ಹೆಚ್‌ಐವಿ/ಏಡ್ಸ್ ಜಾಗೃತಿ ಕುರಿತ ನಾಟಕ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಚಂದ್ರವಳ್ಳಿ ಚಿತ್ರದುರ್ಗ ಈ ಕಾಲೇಜಿನ ವಿದ್ಯಾರ್ಥಿಗಳಾದ ಜಗದೀಶ ಸಿ., ಶಿವಕುಮಾರ್ ಎಸ್., ಮನೋಜ್‌ಕುಮಾರ್ ಕೆ.ಎನ್., ಪುಷ್ಪ, ಸಹನ ಪಿ., ಭುವನ ಎಂ., ಸಾಕಮ್ಮ ಮತ್ತು ಮೊನಿಕಾ 8ಜನರ ತಂಡವು ತೃತೀಯ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ಸದರಿ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಚರ‍್ಯರಾದ ಡಾ. ಎಸ್.ಹೆಚ್. ಪಂಚಾಕ್ಷರಿ ಪ್ರಮಾಣ ಪತ್ರವನ್ನು ನೀಡಿ ಅಭಿನಂದಿಸಿದರು.