ನಾಯಕನಹಟ್ಟಿ:: ನಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಉತ್ತಮವಾಗಿ ಆಡಳಿತ ನಡೆಸುತ್ತಿದೆ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಂಸದ ಬಿಎನ್ ಚಂದ್ರಪ್ಪ ಅವರೇ ಕಾಂಗ್ರೆಸ್ ಅಭ್ಯರ್ಥಿ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ ಎಚ್ ಆಂಜನೇಯ ಸ್ಪಷ್ಟಪಡಿಸಿದರು.
ಅವರು ಸೋಮವಾರ ಹೋಬಳಿಯ ಗಜ್ಜುಗಾನಹಳ್ಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ನಾನು ಟಿಕೆಟ್ ಆಕಾಂಕ್ಷಿ ಎಂದು ಕೆಲವರು ಗಾಳಿ ಸುದ್ದಿ ಅಭಿಸುತಿದ್ದಾರೆ ಅದು ಸತ್ಯಕ್ಕೆ ದೂರವಾದದ್ದು ಯಾವುದೇ ಕಾರಣಕ್ಕೂ ನಾನು ಟಿಕೆಟ್ ಆಕಾಂಕ್ಷಿಯಲ್ಲ ಇದರಲ್ಲಿ ಯಾವುದೇ ಗೊಂದಲ ಬೇಡ ರಾಜ್ಯದ ಜನರು ಕಾಂಗ್ರೆಸ್ ಅಭ್ಯುತಪೂರ್ವದ ಬಹುಮತವನ್ನು ನೀಡಿದ್ದಾರೆ ಅದಕ್ಕೆ ತಕ್ಕ ಹಾಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತದೆ ಇದೆಲ್ಲವೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ.
2013 ರಿಂದ 2018ರ ಅವಧಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಜಾತಿಗಣತಿ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ನಂತರ ಬಂದ ಸರ್ಕಾರಗಳು ಜನಗಣತಿಯನ್ನು ಮೂಲೆಗುಂಪು ಮಾಡಿದವು ಪ್ರಸ್ತುತ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಜಾತಿಗಡತೆ ಅಧಿಕೃತಕ್ಕೆ ಎಲ್ಲಾ ಹಂತದ ಮಾತುಕತೆಗಳು ಮುಗಿದಿವೆ ಶೀಘ್ರ ವರದಿ ಜಾರಿಗ್ ಬರಲಿದೆ ಇದರಿಂದ ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಆಪ್ತ ಕಾರ್ಯದರ್ಶಿ ಮೋಹನ್, ಕೆಪಿಸಿಸಿ ಸಂಚಾಲಕರಾದ ಹಿರೇಹಳ್ಳಿ ಮಲ್ಲೇಶ್, ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀಕಾಂತ್ ನಾಯಕನಹಟ್ಟಿ, ಹಿರೇಹಳ್ಳಿ ದುರುಗೇಶ್, ಮಾಜಿ ಸಚಿವ ಎಚ್ ಆಂಜನೇಯ ಆಪ್ತ ಕಾರ್ಯದರ್ಶಿ ಮಾರುತಿ, ಕನ್ನಯ್ಯ, ಗಜ್ಜುಗಾನಹಳ್ಳಿಜಿ ಬಿ ತಿಪ್ಪೇಸ್ವಾಮಿ, ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪಕ್ಷದ ಮುಖಂಡರು ಉಪಸ್ಥಿತರಿದ್ದರು

About The Author

Namma Challakere Local News
error: Content is protected !!