ಚಳ್ಳಕೆರೆ: ಉತ್ತಮ ಕ್ರೀಡಾಪಟುವಾಗಲು ದೇಹದ ಸಾಮಥ್ಯದೊಂದಿಗೆ ಸಕಾರಾತ್ಮಕ ಭಾವನೆ ಅತ್ಯಗತ್ಯ ಆಹಾರ, ವ್ಯಾಯಾಮ, ವಿಶ್ರಾಂತಿಗಳೆರೆಡೂ ಹಿಡಿತದಲ್ಲಿಟ್ಟು ಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಹೇಳಿದರು.
ಅವರು ನಗರದ ಬಿಸಿನೀರು ಮುದ್ದಪ್ಪ ಪ್ರೌಢಶಾಲಾ ಆವರಣದಲ್ಲಿ ನಡೆದ 2025-26ನೇ ಸಾಲಿನ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ದೊಡ್ಡದೊಡ್ಡ ಗುರಿಗಳನ್ನು ಇಟ್ಟುಕೊಂಡು ಜೀವನದಲ್ಲಿ ಉತ್ತಮ ಕ್ರೀಡಾಪಟುವಾಗಬಹುದು. ಜೊತೆಗೆ ಕ್ರೀಡೆಗಳಿಂದ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯ…
