ಭದ್ರಾ ಮೇಲ್ದಂಡೆ ಯೋಜನೆ : ಕಡೆಯ ಭಾಗದ ತಾಲ್ಲೂಕುಗಳಿಗೆ ಅನ್ಯಾಯವಾಗದಿರಲಿ : ವಿಧಾನ ಸಭೆಯಲ್ಲಿ ಶಾಸಕ ಟಿ.ರಘುಮೂರ್ತಿ ಹೇಳಿಕೆ
ಬೆಳಗಾವಿ ಸುವರ್ಣಸೌಧ,ಡಿ.14(ಕರ್ನಾಟಕ ವಾರ್ತೆ): ಭದ್ರಾ ಮೇಲ್ದಂಡೆ ಯೋಜನೆ ಘೋಷಣೆಯಾಗಿ 20 ವರ್ಷವಾಗುತ್ತಾ ಬಂದಿದೆ. ಇದರ ನಡುವೆ ಯೋಜನೆಯ ಮೇಲ್ಭಾಗದ ಪ್ರದೇಶದಲ್ಲಿ ಪರಿಷ್ಕೃತ ಯೋಜನೆಗಳನ್ನು ಸೇರಿಸಿ, ಕೆರೆಗಳಿಗೆ ನೀರು ತುಂಬಿಸುವ ಹಾಗೂ ನೀರಾವರಿ ಯೋಜನೆಗಳನ್ನು ವಿಸ್ತರಿಸುತ್ತಿದ್ದಾರೆ. ಇದರಿಂದಾಗಿ ಕಡೆಯ ಭಾಗದ ತಾಲ್ಲೂಕುಗಳಿಗೆ ಅನ್ಯಾಯವಾಗುತ್ತದೆ…