ಚಳ್ಳಕೆರೆ :ಹಿರಿಯೂರು: ನಾಳೆ ಶಕ್ತಿ ಗಣಪತಿ ವಿಸರ್ಜನೆ ಹಿರಿಯೂರಿನ ನೆಹರು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಶಕ್ತಿ ಗಣಪತಿಯನ್ನು ಸೆ. 28ರಂದು ಅದ್ದೂರಿಯಾಗಿ ಮೆರವಣಿಗೆ ಮೂಲಕ ಕೊಂಡೊಯ್ದು ವಿಸರ್ಜಿಸಲಾಗುವುದು ಎಂದು ಪೂಜಾ ಸಮಿತಿ ಅಧ್ಯಕ್ಷ ಕಾದಿ ರಮೇಶ್ ತಿಳಿಸಿದ್ದಾರೆ.
ಬೆಳಗ್ಗೆ 11:30ಕ್ಕೆ ಮೆರವಣಿಗೆ ಆರಂಭವಾಗಲಿದ್ದು, ನಗರದ ಹೊರವಲಯದ ಮರಡಿ ರಂಗಜ್ಜನ ತೋಟದ ಬಾವಿಯಲ್ಲಿ ವಿಸರ್ಜನೆ ನಡೆಯಲಿದೆ. 3 ಡಿಜೆ, ಉರುಮೆ ತಮಟೆ ವಾದ್ಯ, ಗೊಂಬೆ ಕುಣಿತ, ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ 13 ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಮೆರಗು ನೀಡಲಿವೆ.