ಚಿತ್ರದುರ್ಗ ನಗರದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳ ಇಲಾಖೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಇಲಾಖೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿದ ಸಿಇಒ…
ಇಂದು(10.12.2025) ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಎಸ್. ಆಕಾಶ್ ರವರು ಚಿತ್ರದುರ್ಗ ನಗರದ ವಿವಿಧ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಹಾಜರಾತಿ ಮತ್ತು ದಾಖಲಾತಿಗಳನ್ನು ಪರಿಶೀಲಿಸಿದರು.
ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಉತ್ತಮವಾಗಿ ಕರ್ತವ್ಯ ನಿರ್ವಹಣೆ ಮಾಡುವಂತೆ ಹಾಗೂ ಕಚೇರಿಯ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಮತ್ತು ಶೌಚಾಲಯಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸೂಚನೆ ನೀಡಿದರು.
ಹಾಗೇ ಕಚೇರಿಗೆ ಸರಿಯಾದ ಸಮಯಕ್ಕೆ ಅಧಿಕಾರಿಗಳು/ ಸಿಬ್ಬಂದಿಗಳು ಹಾಜರಿರಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

