ಕನ್ನಡ ಉಳಿವಿಗಾಗಿ ಪ್ರತಿಯೊಬ್ಬರೂ ಕಟಿಬದ್ಧರಾಗಬೇಕು : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಕನ್ನಡ ಉಳಿವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು,ಇಂದಿನ ಆಧುನಿಕಯುಗದಲ್ಲಿ ತಂದೆ ತಾಯಿಗಳು ಆಂಗ್ಲ ಭಾಷೆ ವ್ಯಾಮೋಹಕ್ಕೆ ಸಿಲುಕಿ ಕನ್ನಡವನ್ನು ಮರೆಯುತ್ತಿದ್ದಾರೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.

ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲೆಯ ಆವರಣದ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಭಾಗವಹಿಸಿ ಮಾತನಾಡಿದರು.
ದಶಕಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಿ ಅನ್ಯಭಾಷೆಯನ್ನು ಕಲಿಯಬೇಕೆಂದು ಪರಕೀಯರು ತಮ್ಮ ವ್ಯಾಪಾರದ ಅಭಿವೃದ್ಧಿಗಾಗಿ ಅಖಂಡ ಭಾರತವನ್ನು ಹರಿದು ಹಂಚಿ ಹಲವಾರು ಪ್ರಾಂತ್ಯಗಳನ್ನಾಗಿ ಮಾಡಿಕೊಂಡು ತಮ್ಮ ದೇಶದ ಸಂಪತ್ತನ್ನು ಕೊಳ್ಳೆಹೊಡೆದರು ಇದನ್ನು ಮನಗಂಡ ನಮ್ಮ ಸಾಹಿತಿಗಳು, ಚಿಂತಕರು ಚಳುವಳಿ ಮೂಲಕ ಕನ್ನಡ ಭಾಷೆಯನ್ನಾಡುವ ಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಲು ಸಾಧ್ಯವಾಯಿತು ಎಂದರು.

ತಹಶೀಲ್ದಾರ್ ರೇಹಾನ್ ಪಾಷ ಮಾತನಾಡಿ, ಕನ್ನಡ ನೆಲ,ಜಲ, ಭಾಷೆಗೆ ಒತ್ತು ನೀಡ ಬೇಕು, ವ್ಯಾಪಾರ ವಹಿವಾಟು ನಡೆಸುತ್ತಿರುವ ಅಂಗಡಿ ಮುಗ್ಗಟ್ಟುಗಳಲ್ಲಿ ಕಡ್ಡಾಯವಾಗಿ ಕನ್ನಡದ ನಾಮ ಫಲಕಗಳನ್ನು ಹಾಕಬೇಕು, ಪ್ರತಿಯೊಬ್ಬರ ಮನೆ ಮನಗಳಲ್ಲಿ ಕನ್ನಡ ರಾಜ್ಯೋತ್ಸವ ಹಬ್ಬದ ವಾತಾವರಣ ನಿರ್ಮಿಸುವಂತಾಗ ಬೇಕು ಸರಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯಲ್ಲಿ ಆಡಳಿತ ನಡೆಸುವಂತೆ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಮೊದಲು ತಾಲೂಕು ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಭುವನೇಶ್ವರಿ ತಾಯಿಯ ಭಾವಚಿತ್ರದ ಮೆರೆವಣಿಗೆಯೊಂದಿಗೆ ಅಂಬೇಡ್ಕರ್ ವೃತ್ತ, ವಾಲ್ಮೀಕಿ ವೃತ್ತದ ಪ್ರಮುಖ ರಸ್ತೆಗಳಲ್ಲಿ ಕನ್ನಡ ದ್ವಜ ಹಾಗೂ ಜಾನಪದ ಮೇಳಗಳೊಂದಿಗೆ ಮೆರವಣಿಗೆ ನಡೆಸಿ ವೇಧಿಕೆಯತ್ತ ಕರೆತರಲಾಯಿತು.

ಕಾರ್ಯಕ್ರದಲ್ಲಿ ನಗರಸಭೆ ಅಧ್ಯಕ್ಷೆ ಶಿಲ್ಪಾ, ಉಪಾಧ್ಯಕ್ಷೆ ಕವಿತಾ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ, ಸದಸ್ಯರಾದ ವೈ.ಪ್ರಕಾಶ್, ಮಲ್ಲಿಕಾರ್ಜುನ, ನಿರ್ಮಲ, ಸುಮ, ಕೆ.ವೀರಭದ್ರಯ್ಯ, ಪಾಲಮ್ಮ, ರಾಘವೇಂದ್ರ, ರಮೇಶ್, ಕವಿತಾ, ಸಾವಿತ್ರಿ, ತಾಪಂ ಇಓ ಹೆಚ್.ಶಶಿಧರ್,, ಪೌರಾಯುಕ್ತ ಜಗರೆಡ್ಡಿ, ಡಿವೈಎಸ್‌ಪಿ ಸತ್ಯನಾರಾಯಣ ರಾವ್, ಸಿಪಿಐ ಮಂಜುನಾಥ್ ಶಿರಹಳ್ಳಿ, ಬಿಇಒ ಸುರೇಶ್, ಬಿಸಿಎಂ ಅಧಿಕಾರಿ ರಮೇಶ್, ಸಿಡಿಪಿಓ ರಾಜುನಾಯ್ಕ್, ಕಾರ್ಮಿಕ ನಿರೀಕ್ಷಕಿ ಕುಸುಮ, ಗಾಯಕ ಮುತ್ತುರಾಜ್, ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳು, ಇತರರಿದ್ದರು.

ಫೊಟೋ. ಚಳ್ಳಕೆರೆ ನಗರದ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆವಹಿಸಿ ಮಾತನಾಡಿದರು.

About The Author

Namma Challakere Local News
error: Content is protected !!