“ಯುವಕರು ರಾಷ್ಟ್ರಭಕ್ತಿಯನ್ನು ಬೆಳೆಸಿಕೊಳ್ಳಲಿ”:- ಶ್ರೀಶಾರದಾಶ್ರಮದ ಮಾತಾಜೀ ತ್ಯಾಗಮಯೀ ಅಭಿಮತ. ಚಳ್ಳಕೆರೆ:-ಇಂದಿನ ಯುವಕರು ರಾಷ್ಟ್ರಭಕ್ತಿಯನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ಅಭಿಪ್ರಾಯಪಟ್ಟರು. ನಗರದ ಬೆಂಗಳೂರು ರಸ್ತೆಯ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ಆವರಣದಲ್ಲಿ 76ನೇ ಗಣರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೆರಿಸಿ ಅವರು ಮಾತನಾಡಿದರು. ಗಣರಾಜ್ಯೋತ್ಸವದ ಇಂತಹ ಶುಭ ಸಂದರ್ಭದಲ್ಲಿ ಇದರ ಆಚರಣೆಯ ಹಿನ್ನೆಲೆಯನ್ನು ತಿಳಿದುಕೊಂಡು ಈ ದಿನಕ್ಕಾಗಿ ಪರಿಶ್ರಮಿಸಿದ ಮಹಾತ್ಮರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು. ಶ್ರೀಶಾರದಾಶ್ರಮದ ಸ್ವಯಂಸೇವಕ ಯತೀಶ್ ಎಂ ಸಿದ್ದಾಪುರ ಗಣರಾಜ್ಯೋತ್ಸವದ ಆಚರಣೆಯ ಬಗ್ಗೆ ಕಿರು ಮಾಹಿತಿ ನೀಡಿದರು. ಗಣರಾಜ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ವನಜಾಕ್ಷಿ ಮೋಹನ್ ಅವರು ದೇಶಭಕ್ತಿ ಗೀತೆ ಯನ್ನು ಹಾಡಿದರು.ಈ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಮಾಣಿಕ್ಯ ಸತ್ಯನಾರಾಯಣ, ಅಂಬುಜಮ್ಮ, ಸಂತೋಷ್ ಅಗಸ್ತ್ಯ,ಡಾ.ಭೂಮಿಕ,ಸುಕೃತಿ,ಮಂಜುಳ ಉಮೇಶ್ ಪಾಲ್ಗೊಂಡಿದ್ದರು.

