ಚಳ್ಳಕೆರೆ : ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ ವಿಕೃತ ಮೆರೆದ ಕಿಡಿಗೇಡಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಸಂಘಟನೆಗಳಿಂದ ರಸ್ತೆ ತಡೆದು ಪ್ರತಿಭಟಿಸಿದ್ದಾರೆ.
ಚಳ್ಳಕೆರೆ ನಗರದ ದೊಡ್ಡುಳ್ಳಾರ್ತಿ ಗ್ರಾಮದ ಡಾ.ಬಿಆರ್.ಅಂಬೇಡ್ಕರ್ ವೃತ್ತದಲ್ಲಿ ತಡ ರಾತ್ರಿ ಕಿಡಿಗೇಡಿಗಳು ಸಗಣಿ ಎರಚಿ, ಭಾವಚಿತ್ರ ವಿಕೃತಗೊಳಿಸಿರುವುದು ಬಾರಿ ವಿವಾದಕ್ಕೆ ಕಾರಣವಾಗಿದೆ.
ಇನ್ನೂ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು ಪೋಲೀಸ್ ರು ಬಿಡು ಬಿಟ್ಟಿದ್ದಾರೆ, ದಲಿತ ಮುಖಂಡರು ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚುವಂತೆ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದೇ ಸಂಧರ್ಭದಲ್ಲಿ ದಲಿತ ಮುಖಂಡರಾದ ದ್ಯಾವರನಹಳ್ಳಿ ಸುರೇಶ್, ಹೊನ್ನುರಸ್ವಾಮಿ, ಹಳೆನಗರದ ವೀರಭದ್ರಪ್ಪ, ದ್ಯಾವರನಹಳ್ಳಿ ತಿಪ್ಪೇಸ್ವಾಮಿ, ನಾಗರಾಜ್, ಗ್ರಾಮದ ಮುಖಂಡರು ಯುವಕರು ಕೆಲ ಕಾಲ ರಸ್ತೆ ತಡೆ ನಡೆಸಿದರು.

