ಚಳ್ಳಕೆರೆ :
ವಿದ್ಯಾರ್ಥಿಗಳು ನೆನಪಿಗಾಗಿ ಶಾಲಾ ಆವರಣದಲ್ಲಿ ಗಿಡ ನೆಟ್ಟು ಪೋಷಿಸಿ-ಎಸ್ ಚೆನ್ನಕೇಶವ.
ಪರಶುರಾಂಪುರ-ಗ್ರಾಮದ ಪಾವಗಡ ರಸ್ತೆಯಲ್ಲಿ ಬರುವ ಸವೋ೯ದಯ ಎಜುಕೇಷನ್ ಟ್ರಸ್ಟ್ ಶಾಲಾ ಆವರಣದಲ್ಲಿ ಪರಿಸರ ದಿನವನ್ನಾ ಗಿಡ ನೆಡುವುದರ ಮೂಲಕ ಆಚರಿಸಲಾಯಿತು.
ಈ ವೇಳೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಚೆನ್ನಕೇಶವ ಮಾತನಾಡಿ,ವಿದ್ಯಾರ್ಥಿ ಜೀವನದಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿವಹಿಸಬೇಕು.ಶಾಲೆಯಲ್ಲಿ ವಿದ್ಯಾರ್ಥಿಗಳು ನೆನಪಿಗಾಗಿ ಗಿಡವನ್ನು ನೆಟ್ಟು ಬೆಳೆಸಬೇಕು.ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸಿ, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಪ್ರೇಮವನ್ನ ಮೈಗೂಡಿಸಿಕೊಳ್ಳಬೇಕು ಎಂದು ಮನವಿ ಜತೆಗೆ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಕತ೯ವ್ಯವಾಗಿದೆ.ಪರಿಸರವನ್ನ ಉಳಿಸಿದರೆ ಮಾತ್ರ ನಮಗೆ ಆರೋಗ್ಯವಾದ ಜೀವನ ನಡೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಈ ವೇಳೆಯಲ್ಲಿ ಶಿಕ್ಷಕರಾದ ಶಾಂತಕುಮಾರ್,ಶ್ರೇಶೈಲ ಮೂತಿ೯ ಸೇರಿದಂತೆ ಪ್ರಾಥಮಿಕ, ಪ್ರೌಢಶಾಲೆ,ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

