ವರ್ಗಾವಣೆಗೊಂಡ ಪಿಡಿಒ ದೇವರಾಜ್ ಅವರಿಗೆ ಆತ್ಮೀಯ ಬೀಳ್ಕೊಡಿಗೆ
ಚಳ್ಳಕೆರೆ:
ವರ್ಗಾವಣೆಗೊಂಡ ಗ್ರಾಮ ಪಂಚಾಯಿತಿ ಪಿಡಿಒ ದೇವರಾಜ್ ಅವರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಯಿಂದ ಆತ್ಮೀಯ ಬೀಳ್ಕೊಡಿಗೆ ಸಮಾರಂಭವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್, ಪಿಡಿಒ ದೇವರಾಜ್ ಅವರ ಆಡಳಿತಾವಧಿಯಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು, ಪಾರದರ್ಶಕ ಆಡಳಿತ ಹಾಗೂ ಸಾರ್ವಜನಿಕರೊಂದಿಗೆ ಹೊಂದಿದ್ದ ಉತ್ತಮ ಸಂಪರ್ಕವನ್ನು ಸ್ಮರಿಸಿದರು. ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಗ್ರಾಮೀಣ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಕೃತಜ್ಞತೆ ಸಲ್ಲಿಸಿದರು.
ಟಿಎನ್ ಕೋಟೆ ಗ್ರಾಮ ಪಂಚಾಯಿತಿಗೆ ವರ್ಗಾವಣೆಗೊಂಡ ಪಿಡಿಒ ದೇವರಾಜ್ ಮಾತನಾಡಿ, ತಮ್ಮ ಕಾರ್ಯಾವಧಿಯಲ್ಲಿ ಸಹಕಾರ ನೀಡಿದ ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದರು. ಮುಂದಿನ ಪಿಡಿಒಗೂ ಇದೇ ರೀತಿಯ ಸಹಕಾರ ನೀಡುವಂತೆ ಮನವಿ ಮಾಡಿದರು.
ಬೀಳ್ಕೊಡಿಗೆ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!