ಚಿತ್ರದುರ್ಗ ನಗರದ ಕೆ.ಈ.ಬಿ. ಸಮುದಾಯ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ನಗರದ ಕೆ.ಈ.ಬಿ. ಸಮುದಾಯ ಭವನದಲ್ಲಿ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ನಡೆದ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ./ ಪಿ.ಯು.ಸಿ. ಪರೀಕ್ಷೆಗಳಲ್ಲಿ ಅತಿ ಹೆಚ್ಚು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಜಗದೀಶ್, ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಡಿ.ಟಿ.ಶ್ರೀನಿವಾಸನ್, ಪ್ರಧಾನಕಾರ್ಯದರ್ಶಿ ತಿಪ್ಪೇಸ್ವಾಮಿ, ಖಜಾಂಚಿ ರುದ್ರಮುನಿ, ಸದಸ್ಯರುಗಳು, ಮುಖಂಡರಾದ ಶ್ರೀನಿವಾಸ್, ಜಗನ್ನಾಥ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ನೌಕರರ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಪೋಷಕರು, ಉಪಸ್ಥಿತರಿದ್ದರು.

