ಪಿಎಸ್‌ಐ ಕೆ ಶಿವಕುಮಾರ್ ರವರಿಗೆ ಪ್ರಥಮ ಬಾರಿಗೆ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ.

ನಾಯಕನಹಟ್ಟಿ : ಸಮೀಪದ ತಳಕು ಪೊಲೀಸ್ ಠಾಣೆಯ ಪಿ ಎಸ್ ಐ ಕೆ ಶಿವಕುಮಾರ್ ರವರಿಗೆ ಪ್ರಥಮ ಬಾರಿಗೆ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಕೆ. ಶಿವಕುಮಾರ್ ರವರು ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲ್ಲೂಕಿನ ಧನಗೆರೆ ಗ್ರಾಮದವರಾಗಿದ್ದು, ಚಿತ್ರದುರ್ಗ ಜಿಲ್ಲಾ
ಪೊಲೀಸ್ ಇಲಾಖೆ ಇಂಥ ದಕ್ಷ ಅಧಿಕಾರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ವಿಚಾರ. ಆದ್ದರಿಂದ ಇಂತಹ
ಅಧಿಕಾರಿಗಳು ಚಿತ್ರದ ಜಿಲ್ಲೆಗೆ ಒಳಪಡುವ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದರೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ರಾಜ್ಯಕ್ಕೆ ಮಾದರಿಯಾಗಲಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ
ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಲೆಂದು ಸಿಬ್ಬಂದಿಗಳು ಆಶಯ ವ್ಯಕ್ತಪಡಿಸಿದರು.

ಪೊಲೀಸ್ ಇಲಾಖೆಯಲ್ಲಿ ನಿಷ್ಠೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಸೃತ್ತಿನ ಕಳವು
ಪುಕರಣಗಳನ್ನು ಪತ್ತೆ ಮಾಡುವಲ್ಲಿ ನೊಂದ ನಾಗರಿಕರಿಗೆ ನ್ಯಾಯ ದೊರೆಕಿಸಿಕೊಂಡುವಲ್ಲಿ ಮಿಂಚಿನ ವೇಗದಲ್ಲಿ ಯಶಸ್ವಿಯಾಗಿದ್ದಾರೆ.
ಇಲಾಖೆಯ ಘನತೆ, ಗೌರವವನ್ನು ಹೆಚ್ಚಿಸಲು
ಕಾರಣಿಕರ್ತರಾಗಿರುತ್ತಾರೆ. ಆದ್ದರಿಂದ ದಿನಾಂಕ: 02.04.2025 ರಂದು ಬೆಳಗ್ಗೆ 08.00 ಗಂಟೆಗೆ ಕೆಎಸ್‌ಆರ್‌ಪಿ ಕವಾಯತು ಮೈದಾನ,
ಕೋರಮಂಗಲ, ಬೆಂಗಳೂರು ನಗರದಲ್ಲಿ ಪದಕ ಪ್ರಧಾನ ಸಮಾರಂಭದಲ್ಲಿ ಚಿತ್ರದುರ್ಗ ಜಿಲ್ಲೆಯ 4 ಜನ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುತ್ತಾರೆ. ಇವರಲ್ಲಿ ತಳಕು ಪೊಲೀಸ್ ಠಾಣೆಯ ಪಿಎಸ್ಐ ಕೆ ಶಿವಕುಮಾರ್ ಕೂಡ ಮುಖ್ಯಮಂತ್ರಿ ಪದಕ್ಕೆ ಆಯ್ಕೆಯಾಗಿರುತ್ತಾರೆ.

ನಾಯಕನಹಟ್ಟಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ದೇವರಾಜ್ ಹಾಗೂ ಸಿಬ್ಬಂದಿ ವರ್ಗದವರು ಪಿಎಸ್ಐ ಕೆ ಶಿವಕುಮಾರ್ ರವರು ಮುಖ್ಯಮಂತ್ರಿ ಪದಕ್ಕೆ ಆಯ್ಕೆಯಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

About The Author

Namma Challakere Local News
error: Content is protected !!