ಇಂದು ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಶ್ರೀ ಸ್ವಾಮಿ ವಿವೇಕಾನಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿಜ್ಞಾನ ಪ್ರದರ್ಶನ ಏರ್ಪಡಿಸಲಾಗಿತ್ತು. ಶ್ರೀ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ನಡೆದ ‘ವಿವೇಕಮ್ – 2025-26’ ರ ವಸ್ತು ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಈ ಕಾರ್ಯಕ್ರಮವು ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಹಾಗೂ ಆಹ್ವಾನಿತ ಅತಿಥಿಗಳು, ಮುಖ್ಯ ಶಿಕ್ಷಕರು ಮತ್ತು ಪೋಷಕರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ಜರುಗಿತು. ವಿದ್ಯಾರ್ಥಿಗಳು ತಾವು ತಯಾರಿಸಿದ ವಿವಿಧ ಮಾದರಿಗಳನ್ನು ಪ್ರದರ್ಶಿಸಿ, ಅವುಗಳ ಬಗ್ಗೆ ವಿವರಣೆ ನೀಡಿದರು. ಈ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಶಿಕ್ಷಣ ಸಂಸ್ಥೆಯು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ.
ಈ ಸಂದರ್ಭದಲ್ಲಿ ಶಾಲೆಯ ಆಡಳಿತಾಧಿಕಾರಿಗಳು ಮುಖ್ಯ ಶಿಕ್ಷಕರು ಸಹ ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

