ಚಳ್ಳಕೆರೆ :
ಚಿತ್ರದುರ್ಗ: 2 ಕೋಟಿ ವೆಚ್ಚದ ಅಭಿವೃದ್ಧಿ
ಕಾಮಗಾರಿಗಳ ಲೋಕಾರ್ಪಣೆ
ಐತಿಹಾಸಿಕ ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಅಗತ್ಯ
ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ
ಪ್ರವಾಸೋದ್ಯಮ ಇಲಾಖೆ 2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ
ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಕೆ. ಸಿ. ವೀರೇಂದ್ರ
ಪಪ್ಪಿಯವರಿಂದ ಲೋಕಾರ್ಪಣೆಗೊಳಿಸಲಾಯಿತು. ಕೋಟೆ
ಮುಂಭಾಗದಲ್ಲಿ ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ,
ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ
ವಿಶ್ರಾಂತಿ ಕೊಠಡಿ, ಮಹಿಳಾ ಮತ್ತು ಪುರುಷ ಸ್ನಾನಗೃಹಗಳು ಹಾಗೂ
ಶೌಚಾಲಯಗಳನ್ನು ನಿರ್ಮಿಸಲಾಗಿದೆ.

