ಚಳ್ಳಕೆರೆ : 2024- 25 ನೇ ಸಾಲಿನ ಬೆಳೆ ನಷ್ಟ ಪರಿಹಾರ, ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ವಿಚಾರ, ಬಗರ್ ಹುಕ್ಕುಂ ಸಾಗುವಳಿ ಚೀಟಿ ಈಗೆ ವಿವಿಧ ಬೇಡಿಕೆಗಳು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಅಖಂಡ ಕರ್ನಾಟಕ ರೈತ ಸಂಘದಿಂದ ಅಕ್ಟೋಬರ್ 27 ಸೋಮವಾರ 11:30 ಕ್ಕೆ ಚಳ್ಳಕೆರೆ ತಾಲೂಕು ಕಚೇರಿ ಮುಂಭಾಗ ರೈತರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಹೇಳಿದ್ದಾರೆ.

ಇನ್ನು ಈ ಬೃಹತ್ ರೈತರ ಪ್ರತಿಭಟನೆಯಲ್ಲಿ ವಿವಿಧ ರೈತ ಸಂಘಟನೆಗಳು ಸಂಘ ಸಂಸ್ಥೆಗಳು ಮಹಿಳೆಯರು ರೈತರು ನಾಗರಿಕರು ವರ್ತಕರು ವಿವಿಧ ವರ್ಗಗಳ ಸೇರದಂತೆ ರೈತರ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಕೆ ಚಿಕ್ಕಣ್ಣ ಕರೆ ನೀಡಿದ್ದಾರೆ.

About The Author

Namma Challakere Local News
error: Content is protected !!