ಚಳ್ಳಕೆರೆ : ವಿದ್ಯಾರ್ಥಿಗಳಲ್ಲಿ ಇಚ್ಛಾಶಕ್ತಿ ಬಹಳಮುಖ್ಯ, ಹಾಗೂ ಪರಿಶ್ರಮ ಇದ್ದರೆ ಮಾತ್ರ ಸಾಧನೆಯ ಹಾದಿಯಲ್ಲಿ ಸಾಗಬಹುದು ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ನಗರದ ಹೆಚ್ ಪಿಪಿಸಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಐ ಕ್ಯೂ ಎ ಸಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯೂತ್ ರೆಡ್ ಕ್ರಾಸ್ ,ರೋವರ್ಸ್ ಹಾಗೂ ರೇಂಜರ್ಸ್ ಘಟಕ, ಸಾಂಸ್ಕೃತಿಕ ಸಮಿತಿ ಮತ್ತು ಕ್ರೀಡಾ ವಿಭಾಗಗಳ ಉದ್ಘಾಟನಾ ಸಮಾರಂಭದಲ್ಲಿ ದೀಪ ಬೆಳೆಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು,
ವಿದ್ಯಾರ್ಥಿಗಳಲ್ಲಿ ಗುರಿ ಇದ್ದರೆ ಸಾಲದು ಇಚ್ಛಾಶಕ್ತಿ ಇರಬೇಕು, ಆ ಗುರಿ ಇಟ್ಟುಕೊಂಡಿರುವುದರಿಂದ ಕಾಲೇಜಿನ 22 ಜನ ಎನ್ ಎಸ್ ಎಸ್ ಶಿಬಿರಾರ್ಥಿಗಳು ರಾಜ್ಯಪಾಲರಿಂದ ಪ್ರಶಸ್ತಿ ಪಡೆಯುವುದು ಹೆಮ್ಮಯ ಸಂಗತಿ, ಇತರ ಸನ್ಮಾನ ಗಳು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆ ಆಗಬೇಕು,
ಬುಡಕಟ್ಟು ಜನಾಂಗದವರು ಹೊಂದಿರುವ ಚಳ್ಳಕೆರೆ ತಾಲೂಕಿನ ಶಿಕ್ಷಣ ಕ್ಷೇತ್ರದಲ್ಲಿ ಮುನ್ನೆಡೆಯಲು ಸಾಮಾಜಿಕ ಸೇವೆ, ಸಾಂಸ್ಕೃತಿಕ ಕ್ರೀಡಾ ಮನೋಭಾವ ಹೊಂದಿರಬೇಕು.
ಪ್ರಾಸ್ತಾವಿಕವಾಗಿ ಮಾತನಾಡಿದ ರಾಮಚಂದ್ರಪ್ಪ, ತಾಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ತಾವು ತಮ್ಮನ್ನು ತಾವು ಗುರುತಿಸಿಕೊಳ್ಳಬೇಕು, ಮನಸ್ಸಿದ್ದರೆ ಮಾತ್ರ ಮಾರ್ಗ ಎಂಬ ತತ್ವವನ್ನು ಅನುಸರಿಸಬೇಕು, ಪೋಷಕರ ಕನಸು ನನಸು ಮಾಡುವ ಮೂಲಕ ವ್ಯವಸ್ಥೆಗಳಿಗೆ ಪೂರಕವಾಗಿ ಹೊಂದಿಕೊಳ್ಳುವ ಮನೋಭಾವ ಹೊಂದಿರಬೇಕು, ಸಮಸ್ಯೆ ಗಳನ್ನು ಯಾರು ಮೆಟ್ಟಿ ನಿಲ್ಲುತ್ತಾರೆ ಅವರು ಮಾತ್ರ ಉತ್ತುಂಗ ಮಟ್ಟದಲ್ಲಿ ಯಶಸ್ಸು ಗಳಿಸುತ್ತಾರೆ ಎಂದರು.
ಇದೇ ಸಂಧರ್ಭದಲ್ಲಿ ಪ್ರಾಶುಂಪಾಲರಾದ ಡಾ.ದೇವಪ್ಪ,ಡಾ.ಚೆನ್ನಕೇಶವ, ವಿಜಯ್ ಕುಮಾರ್, ಕೃಷ್ಣಮೂರ್ತಿ, ಡಾ.ಜಗನ್ನಾಥ್, ಡಾ.ಜಯಮ್ಮ, ಡಾ.ಗಂಗಾಧರ, ಯಲ್ಲಪ್ಪ, ಇತರರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

