ಹಿರಿಯ ವಕೀಲ ಹೆಚ್ ಗಂಗಮೂರ್ತಿ ಮೇಲಿನ ಹಲ್ಲೆ ಖಂಡಿಸಿದ ವಕೀಲ ಸಮುದಾಯ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಚಳ್ಳಕೆರೆ: ರಾಜ್ಯದಲ್ಲಿ ವಕೀಲ ಸಮುದಾಯದ ಮೇಲೆ ಪದೇ ಪದೇ ದುಷ್ಕರ್ಮಿಗಳು ಹಲ್ಲೆ ಮಾಡುತ್ತಿದ್ದು ಸರ್ಕಾರ ವಕೀಲರ ರಕ್ಷಣೆಗಾಗಿ ಬಿಎನ್ಎಸ್ ಕಾಯ್ದೆಯನ್ನು ಜಾರಿಗೆ ತಂದಿದ್ದರು ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ ಇನ್ನಷ್ಟು ಪರಿಣಾಮಕಾರಿಯಾಗಿ ಕಾಯ್ದೆ ಜಾರಿಗೊಂಡಾಗ ಮಾತ್ರ ವಕೀಲರು ತಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ವಕೀಲರ ಸಂಘದ ಅಧ್ಯಕ್ಷ ಕೆ ಎಂ ನಾಗರಾಜ್ ತಿಳಿಸಿದರು.
ನಗರದ ತಾಲೂಕು ಕಚೇರಿ ಆವರಣದಲ್ಲಿ ಮೊಳಕಾಲ್ಮುರು ತಾಲೂಕಿನ ರಾಂಪುರದ ಹಿರಿಯ ವಕೀಲರಾದ ಹೆಚ್ ಗಂಗಮೂರ್ತಿ ತಮ್ಮ ಮನೆಯಲ್ಲಿರುವಾಗ ದುಷ್ಕರ್ಮಿಗಳು ಗುಂಪು ಕಟ್ಟಿಕೊಂಡು ಬಂದು ವಕೀಲರು ಮತ್ತು ಅವರ ಕುಟುಂಬದವರ ಮೇಲೆ ದಾಳಿ ನಡೆಸಿರುವುದು ಖಂಡನೀಯ ಇದು ವಕೀಲ ವೃಂದಕ್ಕೆ ಆತಂಕವಾದ ವಾತಾವರಣ ಉಂಟು ಮಾಡಿದ್ದು ವಕೀಲರ ಸಂರಕ್ಷಣಾ ಕಾಯ್ದೆ ಅಡಿ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ಕೃತಿ ನಡೆಸಿದ ದುಷ್ಕರ್ಮಿಗಳ ಪೈಕಿ ಈಗಾಗಲೇ ಇಬ್ಬರನ್ನು ಬಂಧಿಸಿದ್ದು ಇನ್ನುಳಿದ ದುಷ್ಕರ್ಮಿಗಳನ್ನು ಪೊಲೀಸರು ಶೀಘ್ರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಬೇಕು ಮುಂದಿನ ದಿನಗಳಲ್ಲಿ ವಕೀಲರ ಮೇಲೆ ಹಲ್ಲೆ ನಡೆದ ಸಂದರ್ಭದಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ವೇಳೆ ಬಿಎನ್ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕಾರಿಗಳು ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಪಾಲಯ್ಯ ಪ್ರಧಾನ ಕಾರ್ಯದರ್ಶಿ ಎಮ್ ಸಿದ್ದರಾಜು ಎ ರಾಮಕೃಷ್ಣ ಟಿ ರುದ್ರಯ್ಯ ಏನ್ ಬೀರಪ್ಪ ಪಿ ತಿಪ್ಪೇಸ್ವಾಮಿ ಹನುಮಂತ ರಾಯ ಡಿ ಬಿ ಬೋರಯ್ಯ ಟಿ ಬಿ ಬೋರಯ್ಯ ದರೆ ನಾಗರಾಜ್ ಸಣ್ಣ ಬೋರ ನಾಯಕ ಹನುಮಂತರಾಯಪ್ಪ ಕುರುಡಿಹಳ್ಳಿ ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

