ಚಿತ್ರದುರ್ಗ: ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ
ಮಾಡಬೇಕು
ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಯಿಂದ ಈರುಳ್ಳಿ ಹಾಗೂ ಶೇಂಗಾ
ಬೆಳೆ ನಷ್ಟವಾಗಿದೆ. ಸರ್ಕಾರ ಕೂಡಲೇ ಮಧ್ಯಂತರ ಪರಿಹಾರ
ಘೋಷಿಸಬೇಕು ಮತ್ತು ಬೆಳೆ ವಿಮೆ ಬಿಡುಗಡೆ ಮಾಡಬೇಕು ಎಂದು
ಒತ್ತಾಯಿಸಿ ಮಂಗಳವಾರ ಚಿತ್ರದುರ್ಗದಲ್ಲಿ ರಾಜ್ಯ ರೈತ ಸಂಘ
ಹಾಗೂ ಹಸಿರು ಸೇನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಜಿಲ್ಲಾಡಳಿತ ವಿಮಾ ಮೊತ್ತವನ್ನು ಪರಿಹಾರವಾಗಿ ನೀಡಬೇಕು
ಮತ್ತು ವಿಮಾ ಕಂಪನಿಗಳು ರೈತರಿಗೆ ವಂಚನೆ ಮಾಡದಂತೆ ನಿಗಾ
ವಹಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

