ಜಾತಿ ವ್ಯವಸ್ಥೆ ಬಗ್ಗೆ ಅಂದು ಧ್ವನಿ ಎತ್ತಿದ ನಾರಾಯಣ ಗುರುಗಳು : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ :
ಜಾತಿ ವ್ಯವಸ್ಥೆ, ಅಸಮಾನತೆ ಮತ್ತು ದಬ್ಬಾಳಿಕೆಯನ್ನು ವಿರೋಧಿಸಿ, ಎಲ್ಲಾ ಮಾನವರಿಗೂ ಸಮಾನತೆ ಮತ್ತು ಉದಾರತ್ವವನ್ನು ಸಾರಿದವರು ಬ್ರಹ್ಮ ಶ್ರೀ ನಾರಾಯಣ ಗುರುಗಳು ಎಂದು ಕರ್ನಾಟಕ ಸರಕಾರದ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಹಾಗೂ ಶಾಸಕ ಟಿ.ರಘುಮೂರ್ತಿ ಹೇಳಿದರು.

ಅವರು ನಗರದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ದೇವಸ್ಥಾನಗಳ ಬಾಗಿಲು ಎಲ್ಲರಿಗೂ ತೆರೆದಿರಬೇಕು ಮತ್ತು ಧಾರ್ಮಿಕ ಸಮಾನತೆಯನ್ನು ಪ್ರತಿಪಾದಿಸಿದವರಲಿ ಒಬ್ಬರಾಗಿದ್ದರು, ಜಾತಿ, ಮತಗಳ ತಾರತಮ್ಯವನ್ನು ತೊಡೆದು, ಎಲ್ಲರೂ ಒಂದೇ ಎಂಬ ಸಾರ್ವತ್ರಿಕ ತತ್ವವನ್ನು ಸಾರಿದರು ಎಂದರು.

ಇನ್ನೂ ಪ್ರಾಸ್ತಾವಿಕವಾಗಿ ಮಾತನಾಡಿದ ತಹಶಿಲ್ದಾರ್ ರೇಹಾನ್ ಪಾಷ, ವಿದ್ಯೆಯಿಂದ ಪ್ರಬುದ್ಧರಾಗಿ, ಸಂಘಟನೆಯಿಂದ ಬಲಿಷ್ಠರಾಗಿ,
ಶಿಕ್ಷಣದ ಮಹತ್ವವನ್ನು ಸಾರುತ್ತಾ, ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟಿತರಾಗಿ ಬಲಿಷ್ಠರಾಗಲು ನಾರಾಯಣ ಗುರುಗಳು ಕರೆ ನೀಡಿದ್ದರು ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಪೌರಾಯುಕ್ತ ರಾದ ಜಗರೆಡ್ಡಿ, ನಗರಸಭೆ ಅಧ್ಯಕ್ಷರಾದ ಶಿಲ್ಪ ಮುರಳೀಧರ್, ಉಪಾಧ್ಯಕ್ಷರಾದ ಕವಿತಾ ವೀರೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಸದಸ್ಯರುಗಳು, ಈಡಿಗ ಸಮುದಾಯದ ತಾಲ್ಲೂಕು ಅಧ್ಯಕ್ಷರಾದ ಸಿ.ಓ.ರವಿಕುಮಾರ್, ಮುಖಂಡರಾದ ರಮೇಶ್, ಉಮೇಶ್, ಮಂಜುನಾಥ್, ದೊಡ್ಡರಂಗಪ್ಪ, ಯಶೋಧಮ್ಮ, ಜಯಮ್ಮ, ಲತಾ, ರಾಜಣ್ಣ, ರುದ್ರಮುನಿ, ಉಮೇಶ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪೋಟೋ 1. ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಶಾಸಕ ಟಿ.ರಘುಮೂರ್ತಿ ಪುಷ್ಪರ್ಚಾನೆ ಮಾಡಿದರು.

About The Author

Namma Challakere Local News
error: Content is protected !!