ಹೆಚ್ ಪಿ  ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದಲ್ಲಿ ಟಿ. ಭಾನುಪ್ರಿಯಾಗೆ ದ್ವಿತೀಯ ರಾಂಕ್ 

ಚಳ್ಳಕೆರೆ: ತಾಲೂಕಿನ ಹೆಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಮಾಜಶಾಸ್ತ್ರ ವಿಷಯದಲ್ಲಿ ಕಾಲೇಜಿನ ವಿದ್ಯಾರ್ಥಿನಿ ಟಿ ಭಾನುಪ್ರಿಯರವರು ಎರಡನೇ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಜಿಎಸ್ ಮಂಜುನಾಥ್ ತಿಳಿಸಿದ್ದಾರೆ. 

ನಗರದ ಕಾಲೇಜು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ನಮ್ಮ ಕಾಲೇಜಿನ ವಿದ್ಯಾರ್ಥಿನಿ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರ ಉತ್ತಮ ಮಾರ್ಗದರ್ಶನ ಪಡೆದು ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಎರಡನೇ ರ್‍ಯಾಂಕ್ ಪಡೆದಿದ್ದಾರೆ. ಕಾಲೇಜಿಗೆ ಮೊದಲ ರಾಂಕ್ ಬರಬೇಕಿತ್ತು, ಆದರೆ ಒಂದು ಅಂಕದ ಕಡತದ ಕಾರಣ ಎರಡನೇ ರಾಂಕ್ ಪಡೆಯಲಾಗಿದೆ ವಿದ್ಯಾರ್ಥಿನಿ ಭಾನುಪ್ರಿಯರವರು ಶೈಕ್ಷಣಿಕ ಅವಧಿಯಲ್ಲಿ ಉತ್ತಮವಾಗಿ ವ್ಯಾಸಂಗ ನಡೆಸಿದ್ದರಿಂದ ಈ ಸಾಧನೆ ಸಾಧ್ಯವಾಗದೆ ಮುಂದಿನ ದಿನಗಳಲ್ಲಿ ಅವರ ಇಚ್ಛೆಯಂತೆ ಪಿ ಎಚ್ ಡಿ ಪದವಿ ಪಡೆದು ಉಪನ್ಯಾಸಕರಾಗಬೇಕು ಎಂಬ ಆಸೆ ಈಡೇರಲಿ ಹಾಗೂ ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಪರೀಕ್ಷೆಗಳನ್ನು ತೆಗೆದುಕೊಂಡು ಉತ್ತಮ ಸ್ಥಾನಕ್ಕೆ ಏರಲಿ ಎಂದು ಆಶಿಸುತ್ತೇನೆ ಕಾಲೇಜಿನಲ್ಲಿ ಅತ್ಯಂತ ಹಿಂದುಳಿದ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತಮ ವಾತಾವರಣವಿದೆ ಈ ಹಿಂದೆಯೂ ಕಾಲೇಜಿಗೆ ಉತ್ತಮ ರ್ಯಾಂಕ್ ಗಳು ಬಂದಿದ್ದು ಮುಂದಿನ ದಿನಗಳಲ್ಲಿ ವಿಜ್ಞಾನ ವಿಷಯಕ್ಕೆ ಸಂಬಂಧಪಟ್ಟಂತೆ ಸ್ನಾತಕೋತ್ತರ ತರಗತಿಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಹಂಪಿ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಹಂಪಿ ವಿಶ್ವವಿದ್ಯಾನಿಲಯದ ಕುಲಪತಿಗಳು ಉತ್ಸಾಹ ತೋರಿದು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ ಕೇಂದ್ರ ಸ್ಥಾಪನೆ ಈಗಾಗಲೇ ಕಾರ್ಯ ಆರಂಭವಾಗಿದ್ದು ಮುಂದಿನ ಭವಿಷ್ಯದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಉತ್ತಮವಾದ ಶಿಕ್ಷಣ ದೊರೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ದೇವಪ್ಪ ಮಾತನಾಡಿ ಹೆಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಾಣಿಜ್ಯ ಹಾಗೂ ಕಲಾ ವಿಭಾಗಗಳನ್ನು ಹೊಂದಿದ್ದು ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನಾರ್ಜನೆ ದೃಷ್ಟಿಯಿಂದ ತಂತ್ರಜ್ಞಾನ ಆಧಾರಿತ ಶಿಕ್ಷಣವನ್ನು ನೀಡುತ್ತಿದ್ದು ಕಾಲೇಜಿನಲ್ಲಿ ಅತ್ಯುತ್ತಮವಾದ ಗ್ರಂಥಾಲಯ ಹಾಗೂ ಕೊಠಡಿಗಳ ವ್ಯವಸ್ಥೆ ಇದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಾಗಿ ವಿದ್ಯಾಭ್ಯಾಸ ಮಾಡುತ್ತಿದ್ದು ಅವರಿಗೆ ಸ್ವಲ್ಪಮಟ್ಟಿನ ಆಂಗ್ಲ ಭಾಷೆಯ ಹಾಗೂ ಕಂಪ್ಯೂಟರ್ ಜ್ಞಾನದ ಕೊರತೆ ಇರುವುದರಿಂದ ಇತ್ತೀಚಿನ ದಿನಗಳಲ್ಲಿ ರಾಂಕ್ ಗಳಿಸಲು ತೊಡಕಾಗಿತ್ತು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೇ ಅತ್ಯುತ್ತಮ ಕಾಲೇಜಾಗಿ ಹೊರಹೊಮ್ಮಲಿದೆ ವಿದ್ಯಾರ್ಥಿನಿ ಭಾನುಪ್ರಿಯ ರವರು ಸಮಾಜಶಾಸ್ತ್ರ ವಿಭಾಗದಲ್ಲಿ ಆಂಶಿಕ ಕಿರು ಪ್ರಬಂಧವನ್ನು ಅತ್ಯುತ್ತಮವಾಗಿ ಮಂಡನೆ ಮಾಡಿದ್ದರಿಂದ ರಾಂಕ್ ಗಳಿಸಲು ಸಾಧ್ಯವಾಗಿದೆ ಇದು ಮುಂದಿನ ಶೈಕ್ಷಣಿಕ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಆಶಿಸಿದರು

ವಿದ್ಯಾರ್ಥಿನಿ ಭಾನುಪ್ರಿಯ ಮಾತನಾಡಿ ನನಗೆ ದ್ವಿತೀಯ ರಾಂಕ್ ಬಂದಿರುವುದು ಸಂತಸವಾಗಿದೆ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಜಿಎಸ್ ಮಂಜುನಾಥ್ ಹಾಗೂ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ದೇವಪ್ಪ, ಸೇರಿದಂತೆ ಉಪನ್ಯಾಸಕ ವರ್ಗದ ಪ್ರೋತ್ಸಾಹ ಮತ್ತು ಕುಟುಂಬ ವರ್ಗದ ಬೆಂಬಲದಿಂದಾಗಿ ಈ ಸಾಧನೆ ಸಾಧ್ಯವಾಗಿದೆ ಕಾಲೇಜಿನಲ್ಲಿನ ಅತ್ಯುತ್ತಮ ಬೋಧನೆ ಗ್ರಂಥಾಲಯದಲ್ಲಿ ದೊರೆತ ಉತ್ತಮ ಪುಸ್ತಕಗಳ ನೆರವಿನಿಂದ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯವಾಯಿತು ಸಾಧನೆ ಮಾಡಲು ಗುರಿ ಮುತ್ತು ಸತತ ಪರಿಶ್ರಮವಿದ್ದರೆ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಮುಂದಿನ ದಿನಗಳಲ್ಲಿ ಪಿ ಹೆಚ್ ಡಿ ಪದವಿ ಪಡೆದು ಉಪನ್ಯಾಸಕಿ ಆಗುವುದು ಹಾಗೂ ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ನಾಗರೀಕ ಸೇವೆ ಸಲ್ಲಿಸುವುದು ನನ್ನ ಕನಸಾಗಿದೆ ಎಂದು ತಿಳಿಸಿದರು.

ಇದೆ ವೇಳೆ ಕಾಲೇಜಿನ ವತಿಯಿಂದ ರ್ಯಾಂಕ್ ಪಡೆದ ಟಿ ಭಾನುಪ್ರಿಯರವರನ್ನು ಸಾಂಕೇತಿಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಚಿತ್ತಯ್ಯ, ಗ್ರಂಥಾಲಯ ವಿಭಾಗದ ಮುಖ್ಯಸ್ಥ ಪಾಪಣ್ಣ ಸೇರಿದಂತೆ ಕಾಲೇಜಿನ ಉಪನ್ಯಾಸಕ ವರ್ಗ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!