ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಚಳ್ಳಕೆರೆ ನಗರದ ಚೇಂಬರ್ ಆಫ್ ಕಾಮರ್ಸ್ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಕುಶಲ ಕರ್ಮಿಗಳ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ನಗರದ ಚೆಂಬರ್ ಆಫ್ ಕಾಮರ್ಸ್ ಕಲ್ಯಾಣ ಮಂಟಪದಲ್ಲಿ ನಡೆದ ರಾಷ್ಟ್ರೀಯ ಕುಶಲ ಕರ್ಮಿಗಳ ದಿನಾಚರಣೆ, ಕಮ್ಮಾರ ಕುಶಲ ಕರ್ಮಿಗಳ ಸಮಾವೇಶ , ಕಮ್ಮಾರ ಕುಶಲ ಕರ್ಮಿಗಳ ಅಭಿವೃದ್ಧಿ ನಿಗಮ, ಕಬ್ಬಿಣ ಮತ್ತು ಉಕ್ಕು ಸಾಮಾಗ್ರಿಗಳ ಉತ್ಪಾದನೆ ಮತ್ತು ಮಾರಾಟ ಮಂಡಳಿಯ ಸ್ಥಾಪನೆಗೆ ಆಗ್ರಹಿಸಿ ಮನವಿ ಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಸಾಹಿತಿ ಗಳಾದ ವೀರಭದ್ರಪ್ಪ, ಡಾ.ಸಿದ್ದಲಿಂಗಮ್ಮ, ಸಮುದಾಯದ ತಾಲ್ಲೂಕು ಅಧ್ಯಕ್ಷರಾದ ರವಿಕುಮಾರ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

