ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಜವಾಬ್ದಾರಿ ಹೊರದಿದ್ದರೆ ಮುಂದಿನ ಪೀಳಿಗೆ ಹಣ ನೀಡಿ ಗಾಳಿ ನೀರು ಕೊಳ್ಳಬೇಕಾಗುತ್ತದೆ: ನ್ಯಾ. ಬಿ ಆರ್ ಪುನೀತ್

ಚಳ್ಳಕೆರೆ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಇಂದಿನ ವಿದ್ಯಾರ್ಥಿಗಳು ಶಾಲೆ ಹಾಗೂ ಮನೆಯಲ್ಲಿ ಸಸಿಗಳನ್ನು ನೆಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಾಣ ಮಾಡುವ ಜವಾಬ್ದಾರಿ ಹೊರಬೇಕು ಎಂದು ನಗರದ ಜೆಎಂಎಫ್‌ಸಿ ನ್ಯಾಯಾಲಯದ ಅಪರ ಸಿವಿಲ್ ನ್ಯಾಯಾಧೀಶರಾದ ಪುನೀತ್ ಬಿ ಆರ್ ಕರೆ ನೀಡಿದರು.

ನಗರದ ಎಸ್ ಜೆ ಎಂ ಶಾಲೆಯಲ್ಲಿ ಕಾನೂನು ಸೇವಾ ಸಮಿತಿ ವಕೀಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ಕಾನೂನು ಸಾಕ್ಷರತೆ ಮತ್ತು ಸಮುದಾಯ ಸಂರಕ್ಷಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪರಿಸರದ ಮೇಲೆ ಪ್ರತಿಯೊಬ್ಬರು ಅವಲಂಬಿತರಾಗಿದ್ದೇವೆ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಆಗಬೇಕು ಈಗಿನಿಂದಲೇ ಪರಿಸರ ಸಂರಕ್ಷಣೆ ಮಾಡದಿದ್ದರೆ ಮುಂದಿನ ಪೀಳಿಗೆ ಗಾಳಿ ಮತ್ತು ನೀರನ್ನು ಹಣ ಕೊಟ್ಟು ಖರೀದಿಸಬೇಕಾಗುತ್ತದೆ. ಎಂದು ತಿಳಿಸಿದರು. 

ವಕೀಲರಾದ ಡಿ ಶಿಲ್ಪ ಮಾತನಾಡಿ ಪರಿಸರ ಮಾಲಿನ್ಯದಿಂದ ಅನೇಕ ರೋಗಗಳು ಹರಡುತ್ತಿವೆ ಇಂದು ವಾಯುಮಾಲಿನ್ಯ ಶಬ್ದ ಮಾಲಿನ್ಯ ಜಲ ಮಾಲಿನ್ಯ ಸೇರಿದಂತೆ ಪರಿಸರದ ಎಲ್ಲಾ ಮೂಲಗಳನ್ನು ಮಲಿನಗೊಳಿಸುತ್ತಿದ್ದೇವೆ ಇದರಿಂದಾಗಿ ನಮಗೆ ನಾವೇ ರೋಗವನ್ನು ತಂದುಕೊಳ್ಳುವ ವ್ಯವಸ್ಥೆಗೆ ಮುಂದಾಗುತ್ತಿದ್ದೇವೆ ಆದ್ದರಿಂದ ವಿದ್ಯಾರ್ಥಿ ದೆಸೆಯಲ್ಲಿಯೇ ಪರಿಸರ ಸಂರಕ್ಷಣೆಯ ಬಗ್ಗೆ ಶಿಕ್ಷಕರು ಹಾಗೂ ಕುಟುಂಬಸ್ಥರು ಮಕ್ಕಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ಹೊರಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಶಾಲ ಆವರಣದಲ್ಲಿ ವಿದ್ಯಾರ್ಥಿಗಳೊಂದಿಗೆ ನ್ಯಾಯಾಧೀಶರು ಸಸಿ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಅಶ್ವತ ನಾಯಕ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ರಾಜೇಶ್ ಮುಖ್ಯ ಶಿಕ್ಷಕಿ ನಾಗರತ್ನ ಬಸವರಾಜೇಶ್ವರಿ ಶಿಲ್ಪಾ ಡಿ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!