ಚಳ್ಳಕೆರೆ : ಕೇಂದ್ರ ಸರ್ಕಾರವು ಬಡವರ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದೆ. ಬಡವರ ಶಾಸನಬದ್ಧ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದರು.

ಕಾಂಗ್ರೆಸ್‌ ಪಕ್ಷದಿಂದ
ಆಯೋಜಿಸಿದ್ದ ಜನಜಾಗೃತಿ ಪಾದಯಾತ್ರೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯನ್ನು ಯಥಾವತ್ತಾಗಿ ಮುಂದುವರೆಸಬೇಕು ಎಂದು ಒತ್ತಾಯಿಸಿ, ದೊಡ್ಡೆರಿ ಗ್ರಾಮದಿಂದ ವಯಾ ನಗರಂಗೆರೆ ಮುಖಾಂತರ ಚಳ್ಳಕೆರೆ ನಗರದ ಅಂಬೇಡ್ಕರ್ ವೃತ್ತದವರೆಗೆ ಆಯೋಜಿಸಿದ್ದ ಪಾದಯಾತ್ರೆಯಲ್ಲಿ ಮಾತನಾಡಿದರು,

‘ನರೇಗಾ ಯೋಜನೆಯು ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗದ ಹಕ್ಕನ್ನು ನೀಡಿದೆ. ವಿಬಿ-ಜಿ ರಾಮ್ ಜಿ ಯೋಜನೆಯು ನರೇಗಾದ ಮೂಲ ಚೈತನ್ಯವನ್ನು ದುರ್ಬಲಗೊಳಿಸುತ್ತದೆ’

ಕೇಂದ್ರ ಸರ್ಕಾರದ ಕ್ರಮಗಳು ಬಡವರ ಮೇಲೆ ದಾಳಿಯನ್ನು ಸೂಚಿಸುತ್ತದೆ. ಬಡವರನ್ನು ಬೆಂಬಲಿಸುವ ವ್ಯವಸ್ಥೆಗಳನ್ನು ಕ್ರಮೇಣವಾಗಿ ತೆಗೆದು ಹಾಕಲಾಗುತ್ತಿದೆ’
ವಿಬಿ-ಜಿ ರಾಮ್ ಜಿ ಯೋಜನೆಯನ್ನು ತೆಗೆದು ಹಾಕಿ, ನರೇಗಾವನ್ನು ಮರುಜಾರಿಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್‌ ದೇಶದಾದ್ಯಂತ ‘ನರೇಗಾ ರಕ್ಷಿಸಿ ಸಂಗ್ರಾಮ ಯಾತ್ರೆ’ ಪ್ರತಿಭಟನೆ ಹಮ್ಮಿಕೊಂಡಿದೆ ಎಂದರು.

ಇದೇ ಸಂಧರ್ಭದಲ್ಲಿ ಜಿಲ್ಲಾ ಅಧ್ಯಕ್ಷ ತಾಜ್ ಪೀರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಭದ್ರಪ್ಪ,ಪರುಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ್,
ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಣ್ಣ, ತಾಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ರಮೇಶ್ ಗೌಡ, ಆರ್.ಪ್ರಸನ್ನ ಕುಮಾರ್, ವಿರೂಪಾಕ್ಷ, ಮಲ್ಲಿಕಾರ್ಜುನ, ಬಂಗ್ಲೇ ಶ್ರೀನಿವಾಸ್, ಟಿ.ವಿಜಯ್ ಕುಮಾರ್, ನಾಗರಾಜ್, ತಿಪ್ಪೇಸ್ವಾಮಿ, ಮಹಿಳೆಯರು, ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಇತರರು ಪಾಲ್ಗೊಂಡಿದ್ದರು.

About The Author

Namma Challakere Local News
error: Content is protected !!