ಚಳ್ಳಕೆರೆ : ಸರ್ಕಾರಿ ಶಾಲೆಗಳೆಂದರೆ ಮೂಗುಮುರಿಯವರ ಜೊತೆಯಲ್ಲಿ ಸರ್ಕಾರಿ ಶಾಲೆಗಳ ಹೇಳಿಗೆಗೆ ಸದಾ ಶ್ರಮಿಸುತ್ತಿರುವ ಯುವಕರ ತಂಡವೊಂದು ಸರ್ಕಾರಿ ಶಾಲೆಗೆ ಸಿ ಸಿ ಕ್ಯಾಮೆರಾ ಅಳವಡಿಸಿ ಮಾನವೀಯತೆ ಮೆರೆದಿದ್ದಾರೆ.

ಹೌದು ಚಳ್ಳಕೆರೆ ನಗರದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಯ ಶಿಕ್ಷಕರ ಜೊತೆ ಚರ್ಚಿಸಿ , ಮಕ್ಕಳ ಕಲಿಕೆಗೆ ಅನುವು ಮಾಡಿಕೊಟ್ಟಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಕೆ.ಕುಮಾರಸ್ವಾಮಿ ಅಭಿಮಾನಿ ಬಳಗ ಹಾಗೂ ಯಾಕೂಬ್ ಆಲಿ ಮತ್ತು ಫರೀದ್ ಖಾನ್, ತೌಸಿಫ್ , ದಾದಾಪೀರ್ , ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ರೆಹಮಾನ್, ಹಾಗೂ ಮುಖ್ಯ ಶಿಕ್ಷಕರಾದ ನಸೀಮಾ ಬಾನು, ಸಲ್ಮಾ , ಶ್ರೀಧರ್ , ಜಬಿವುಲ್ಲಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರ ಕೋರಿಕೆ ಮೇರೆಗೆ ಸಿಸಿ ಕ್ಯಾಮೆರಾ ಅಳವಡಿಸುವ ವ್ಯವಸ್ಥೆ ಮಾಡಿಕೊಡಲಾಗಿದೆ.

About The Author

Namma Challakere Local News
error: Content is protected !!