ಚಳ್ಳಕೆರೆ : ಅತೀ ಸಣ್ಣ ರೈತರಿಗೆ ಸರಕಾರ ನೀಡುವ ಗಂಗಾ ಕಲ್ಯಾಣ ಯೋಜನೆಯನ್ನು ರೈತರು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ 2025-26ನೇ ಸಾಲಿನ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಎಸ್.ಸಿ.ಪಿ./ ಟಿ.ಎಸ್.ಪಿ. ಯೋಜನೆಯಡಿ ಕೊಳವೆ ಬಾವಿ ಕೊರೆಸಿದ ಫಲಾನುಭವಿಗಳಿಗೆ ಪಂಪು ಮೋಟಾರ್ ಮತ್ತು ಇನ್ನಿತರೇ ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿತರಣೆ ಮಾಡಿ ಮಾತನಾಡಿದರು.
ಗಂಗಾ ಕಲ್ಯಾಣ ಯೋಜನೆಯಲ್ಲಿ ರೈತರಿಗೆ ಕೊಳವೆ ಭಾವಿಕೊರೆಸಿ, ಪಂಪ್ ಮೊಟರ್ ನೀಡುವುದು ಬಡ ರೈತ ಕುಟುಂಬ ವರ್ಗಕ್ಕೆ ವರದಾನವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಾದ ಅಣ್ಣಪ್ಪ, ರವಿಕುಮಾರ್, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುದ್ರೇಶ್, ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರಾದ ನಾಗೇಶ್, ಪ್ರಕಾಶ್, ನಾಗಭೂಷಣ, ವಾಲ್ಮೀಕಿ, ಪ್ರಕಾಶ್, ರಂಗಸ್ವಾಮಿ, ಸಂಪತ್ ಕುಮಾರ್, ಮಂಜುನಾಥ್, ಅನಿಲ್, ಜಗಳೂರು ಸ್ವಾಮಿ, ವೀರೇಶ್, ನಾಗರಾಜ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.

