ಚಳ್ಳಕೆರೆ :

ಕೇಂದ್ರ ಮತ್ತು ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕಾಧಿಕಾರಿ ಶಶಿಧರ್ ಕಿವಿಮಾತು ಹೇಳಿದರು.

ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಸದಸ್ಯರಿಗೆ ಆಯೋಜಿಸಿದ್ದ ಲಿಂಗತ್ವ ದೌರ್ಜನ್ಯ ಕುರಿತು ಪರಿವರ್ತನೆಯ ಹೆಜ್ಜೆ ಕಾರ್ಯಗಾರದಲ್ಲಿ ಮಾತನಾಡಿದರು.

ಮಹಿಳೆಯರೂ ಸಬಲರಾಗಬೇಕೆಂಬ ಉದ್ದೇಶದೊಂದಿಗೆ ಸರ್ಕಾರಗಳು ಹಲವಾರು ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಿವೆ. ಅದರಲ್ಲಿ ಪ್ರಮುಖವಾಗಿ ಸಂಜೀವಿನಿ ಯೋಜನೆ ಜಾರಿಯಾಗಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬ ಸ್ವಸಹಾಯ ಸಂಘಗಳ ಸದಸ್ಯತ್ವ ಪಡೆದು ತಮ್ಮ ಜೀವನ ಮಟ್ಟವನ್ನು ಉತ್ತಮಪಡಿಸಿಕೊಂಡು ಆರ್ಥಿಕವಾಗಿ ಸುಧಾರಣೆ ಹೊಂದುವ ಜೂತೆಜೂತೆಗೆ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ,ಅವಕಾಶಗಳಿಂದ ವಂಚಿತರಾಗುತ್ತಿರುವುದನ್ನು ಗಮನಿಸಿ ಸಂವಿಧಾನದ ಮುಖೇನ ಮಹಿಳೆಯರಿಗೂ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ.

ಸಮಾಜದಲ್ಲಿ ಮಹಿಳೆಯರನ್ನು ಕೀಳಾಗಿ ನೋಡುವ ಪ್ರವೃತ್ತಿ ಬದಲಾಗಬೇಕಿದ್ದು, ಹೆಣ್ಣು ಮಕ್ಕಳು ದೌರ್ಜನ್ಯವನ್ನು ಪ್ರಶ್ನೆ ಮಾಡುವ ಧೈರ್ಯ ಪ್ರದರ್ಶಿಸಬೇಕು ಎಂದರು ಮಹಿಳೆಯರ ಮೇಲಿನ ದೌರ್ಜನ್ಯ.ಬಾಲ್ಯ ವಿವಾಹ.ಶಿಕ್ಷಣ ಮಹಿಳೆಯರಿಗೆ ದೂರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಇಒ ಕೆ.ಎಸ್.ಸುರೇಶ್.ಶಿಶುಅಬಿವೃದ್ಧಿ ಅಧಿಕಾರಿ ಹರಿಪ್ರಸಾದ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕಿ ಕುಸುಮ. ಸಮಾಜ ಕಲ್ಯಾಣ ಇಲಾಖೆ.ಸಂಜೀವಿನಿ ಯೋಜನೆಯ ಸಿಬ್ಬಂದಿಗಳು ಇತರರಿದ್ದರು.

About The Author

Namma Challakere Local News
error: Content is protected !!